ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಕೆಸಿಆರ್- ನಟ ವಿಜಯ್ ಭೇಟಿ
ಹೈದರಾಬಾದ್, ಮೇ19: ಜನಪ್ರಿಯ ತಮಿಳು ನಟ ವಿಜಯ್ ಬುಧವಾರದಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್‌ರನ್ನು ಭೇಟಿ ಮಾಡಿದ್ದಾರೆ. ತೆಲಂಗಾಣ ರಾಜಕೀಯ ವಲಯದಲ್ಲಿ ಭಾರಿ ಗಮನ ಸೆಳೆದಿದೆ. ತಮಿಳು ನಟ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ ಎಂಬ ಊಹಾಪೋಹಗಳು ಕೂಡ ಹರಡಿಕೊಂಡಿವೆ.
ಚಂದ್ರಶೇಖರ್ ರಾವ್ ಅವರ ನಿವಾಸ ಪ್ರಗತಿ ಭವನದಲ್ಲಿ ವಿಜಯ್ ಮತ್ತು ಕೆಸಿಆರ್ ಭೇಟಿಯಾಗಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷದ ನಾಯಕ ವಿಜಯ್‌ರಿಗೆ ಶಾಲು ಹೊದಿಸಿ ಅಭಿನಂದಿಸಿದರು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.
|
ಕೂತೂಹಲಕ್ಕೆ ತೆರೆ
ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ಮುಖ್ಯಮಂತ್ರಿಗಳ ಕಚೇರಿ ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳುವ ಮೂಲಕ ರಾಜಕೀಯ ಕಾರಿಡಾರ್‌ಗಳಲ್ಲಿ ವದಂತಿ ಉಂಟಾಗಿತ್ತು. ಆದರೆ ವಿಜಯ್ ಅವರು ತಮ್ಮ 66ನೇ ಸಿನಿಮಾಗಾಗಿ ಹೈದರಾಬಾದ್‌ಗೆ ಬಂದಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರ ರಾಜಕೀಯದತ್ತ ಕೆಸಿಆರ್ ಹೆಜ್ಜೆ
ದಕ್ಷಿಣ ಭಾರತದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವಿಜಯ್ ರಾಜಕೀಯಕ್ಕೆ ಬರಲು ಮುಂದಾಗಿದ್ದಾರೆ ಎನ್ನಲಾಗಿತ್ತು. ಇದೇ ಸಂದರ್ಭದಲ್ಲಿ ಕೆಸಿಆರ್ ಕೂಡ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವುದಕ್ಕೆ ಸಿದ್ಧವಾಗುತ್ತಿದ್ದಾರೆ. ಜೊತೆಗೆ ಕಳೆದ ತಿಂಗಳು ಪರ್ಯಾಯ ರಾಷ್ಟ್ರೀಯ ಕಾರ್ಯಸೂಚಿಗಾಗಿ ಕೆಲಸ ಮಾಡುವುದಕ್ಕೆ ಸಮಾನ ಮನಸ್ಥಿತಿಯುಳ್ಳ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಟಿಆರ್‌ಎಸ್ ಪಕ್ಷ ಸಿದ್ಧವಿದೆ ಎಂದು ಕೆಸಿಆರ್ ಹೇಳಿದ್ದರು. ಈ ಸಂದರ್ಭದಲ್ಲಿ ಈ ಇಬ್ಬರ ಭೇಟಿ ಸಹಜವಾಗಿಯೇ ವದಂತಿಗೆ ಕಾರಣವಾಗಿತ್ತು.

ಪ್ರಶಾಂತ್ ಕಿಶೋರ್ ಜೊತೆ ಸಭೆ ನಡೆಸಿದ್ದ ಕೆಸಿಆರ್
ತೃತೀಯ ರಂಗವನ್ನು ಕಟ್ಟು ಆಲೋಚನೆಯಲ್ಲಿರುವ ಕೆಸಿಆರ್ ಇತ್ತೇಚೆಗೆ ಚುನಾವಣಾ ಚಾಣಕ್ಷ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿದ್ದರು. ಕಿಶೋರ್ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಊಹಪೋಹವಿರುವ ಸಂದರ್ಭದಲ್ಲಿ ಕೆಸಿಆರ್ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು. ಮುಂದಿನ ವರ್ಷ ತೆಲಂಗಾಣದಲ್ಲಿ ವಿದಾನ ಸಭಾ ಚುನಾವಣೆ ನಡೆಯಲಿರುವುದರಿಂದ ಪಕ್ಷಕ್ಕೆ ರಾಜಕೀಯ ಸಲಹೆಗಾರನಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು.

ಬಿಜೆಪಿ ವಿರುದ್ಧ ಹೋರಾಡಲು ವೇದಿಕೆ ಸಜ್ಜು
ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟ ನಡೆಸುವ ಸಲುವಾಗಿ ಕೆಸಿಆರ್ ಬಿಜೆಪಿಯೇತರ ಸಿಎಂಗಳನ್ನು ತೃತೀಯ ರಂಗ ರಚಿಸುವ ಆಲೋಚನೆಯಲ್ಲಿದ್ದಾರೆ. ಇದರ ಮೊದಲ ಭಾಗವಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಕಳೆದ ತಿಂಗಳು ಭೇಟಿಯಾಗಿದ್ದರು. ಕೇಂದ್ರ ಸರ್ಕಾರ ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಆದ್ಯತೆ ನೀಡುತ್ತಿದೆ. ಅದಕ್ಕಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗೂಡಿ ಎದುರಿಸುವ ಸಲುವಾಗಿ ಬಿಜೆಪಿಯೇತರ ಪಕ್ಷಗಳು ಒಂದಾಗಬೇಕೆಂದು ಕೆಸಿಆರ್ ಕರೆ ಕೊಟ್ಟಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications