ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಕೆಸಿಆರ್- ನಟ ವಿಜಯ್ ಭೇಟಿ

|
Google Oneindia Kannada News

ಹೈದರಾಬಾದ್‌, ಮೇ19: ಜನಪ್ರಿಯ ತಮಿಳು ನಟ ವಿಜಯ್ ಬುಧವಾರದಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ರನ್ನು ಭೇಟಿ ಮಾಡಿದ್ದಾರೆ. ತೆಲಂಗಾಣ ರಾಜಕೀಯ ವಲಯದಲ್ಲಿ ಭಾರಿ ಗಮನ ಸೆಳೆದಿದೆ. ತಮಿಳು ನಟ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ ಎಂಬ ಊಹಾಪೋಹಗಳು ಕೂಡ ಹರಡಿಕೊಂಡಿವೆ.

ಚಂದ್ರಶೇಖರ್ ರಾವ್ ಅವರ ನಿವಾಸ ಪ್ರಗತಿ ಭವನದಲ್ಲಿ ವಿಜಯ್ ಮತ್ತು ಕೆಸಿಆರ್‌ ಭೇಟಿಯಾಗಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್‌ ಆಗಿವೆ. ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷದ ನಾಯಕ ವಿಜಯ್‌ರಿಗೆ ಶಾಲು ಹೊದಿಸಿ ಅಭಿನಂದಿಸಿದರು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ಉದ್ಯಮಿ, ಪತ್ರಿಕೋದ್ಯಮಿಗಳಿಗೆ ರಾಜ್ಯಸಭೆ ಟಿಕೆಟ್ ಘೋಷಣೆ ಉದ್ಯಮಿ, ಪತ್ರಿಕೋದ್ಯಮಿಗಳಿಗೆ ರಾಜ್ಯಸಭೆ ಟಿಕೆಟ್ ಘೋಷಣೆ

ಕೂತೂಹಲಕ್ಕೆ ತೆರೆ

ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ಮುಖ್ಯಮಂತ್ರಿಗಳ ಕಚೇರಿ ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳುವ ಮೂಲಕ ರಾಜಕೀಯ ಕಾರಿಡಾರ್‌ಗಳಲ್ಲಿ ವದಂತಿ ಉಂಟಾಗಿತ್ತು. ಆದರೆ ವಿಜಯ್ ಅವರು ತಮ್ಮ 66ನೇ ಸಿನಿಮಾಗಾಗಿ ಹೈದರಾಬಾದ್‌ಗೆ ಬಂದಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರ ರಾಜಕೀಯದತ್ತ ಕೆಸಿಆರ್ ಹೆಜ್ಜೆ

ರಾಷ್ಟ್ರ ರಾಜಕೀಯದತ್ತ ಕೆಸಿಆರ್ ಹೆಜ್ಜೆ

ದಕ್ಷಿಣ ಭಾರತದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವಿಜಯ್ ರಾಜಕೀಯಕ್ಕೆ ಬರಲು ಮುಂದಾಗಿದ್ದಾರೆ ಎನ್ನಲಾಗಿತ್ತು. ಇದೇ ಸಂದರ್ಭದಲ್ಲಿ ಕೆಸಿಆರ್ ಕೂಡ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವುದಕ್ಕೆ ಸಿದ್ಧವಾಗುತ್ತಿದ್ದಾರೆ. ಜೊತೆಗೆ ಕಳೆದ ತಿಂಗಳು ಪರ್ಯಾಯ ರಾಷ್ಟ್ರೀಯ ಕಾರ್ಯಸೂಚಿಗಾಗಿ ಕೆಲಸ ಮಾಡುವುದಕ್ಕೆ ಸಮಾನ ಮನಸ್ಥಿತಿಯುಳ್ಳ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಟಿಆರ್‌ಎಸ್‌ ಪಕ್ಷ ಸಿದ್ಧವಿದೆ ಎಂದು ಕೆಸಿಆರ್‌ ಹೇಳಿದ್ದರು. ಈ ಸಂದರ್ಭದಲ್ಲಿ ಈ ಇಬ್ಬರ ಭೇಟಿ ಸಹಜವಾಗಿಯೇ ವದಂತಿಗೆ ಕಾರಣವಾಗಿತ್ತು.

ಪ್ರಶಾಂತ್ ಕಿಶೋರ್ ಜೊತೆ ಸಭೆ ನಡೆಸಿದ್ದ ಕೆಸಿಆರ್

ಪ್ರಶಾಂತ್ ಕಿಶೋರ್ ಜೊತೆ ಸಭೆ ನಡೆಸಿದ್ದ ಕೆಸಿಆರ್

ತೃತೀಯ ರಂಗವನ್ನು ಕಟ್ಟು ಆಲೋಚನೆಯಲ್ಲಿರುವ ಕೆಸಿಆರ್‌ ಇತ್ತೇಚೆಗೆ ಚುನಾವಣಾ ಚಾಣಕ್ಷ ಪ್ರಶಾಂತ್‌ ಕಿಶೋರ್‌ ಅವರನ್ನು ಭೇಟಿಯಾಗಿದ್ದರು. ಕಿಶೋರ್‌ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಊಹಪೋಹವಿರುವ ಸಂದರ್ಭದಲ್ಲಿ ಕೆಸಿಆರ್ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು. ಮುಂದಿನ ವರ್ಷ ತೆಲಂಗಾಣದಲ್ಲಿ ವಿದಾನ ಸಭಾ ಚುನಾವಣೆ ನಡೆಯಲಿರುವುದರಿಂದ ಪಕ್ಷಕ್ಕೆ ರಾಜಕೀಯ ಸಲಹೆಗಾರನಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು.

ಬಿಜೆಪಿ ವಿರುದ್ಧ ಹೋರಾಡಲು ವೇದಿಕೆ ಸಜ್ಜು

ಬಿಜೆಪಿ ವಿರುದ್ಧ ಹೋರಾಡಲು ವೇದಿಕೆ ಸಜ್ಜು

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟ ನಡೆಸುವ ಸಲುವಾಗಿ ಕೆಸಿಆರ್‌ ಬಿಜೆಪಿಯೇತರ ಸಿಎಂಗಳನ್ನು ತೃತೀಯ ರಂಗ ರಚಿಸುವ ಆಲೋಚನೆಯಲ್ಲಿದ್ದಾರೆ. ಇದರ ಮೊದಲ ಭಾಗವಾಗಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರನ್ನು ಕಳೆದ ತಿಂಗಳು ಭೇಟಿಯಾಗಿದ್ದರು. ಕೇಂದ್ರ ಸರ್ಕಾರ ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಆದ್ಯತೆ ನೀಡುತ್ತಿದೆ. ಅದಕ್ಕಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗೂಡಿ ಎದುರಿಸುವ ಸಲುವಾಗಿ ಬಿಜೆಪಿಯೇತರ ಪಕ್ಷಗಳು ಒಂದಾಗಬೇಕೆಂದು ಕೆಸಿಆರ್‌ ಕರೆ ಕೊಟ್ಟಿದ್ದಾರೆ.

English summary
Kollywood actor Thalapathy Vijay on Wednesday met Telangana CM Chandrashekar Rao. The meeting has received a lot of attention in the political world of Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X