ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ; ಮಗನಿಂದಲೇ ತಂದೆ ಹತ್ಯೆ!

ಹೈದರಾಬಾದ್, ಜೂನ್ 07 : ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಪಡೆಯಲು ಪುತ್ರನೇ ತಂದೆಯನ್ನು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತಾಯಿ ಮತ್ತು ತಮ್ಮ ಈ ಕೊಲೆ ಸಂಚಿಗೆ ಸಹಕಾರ ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ತೆಲಂಗಾಣ ರಾಜ್ಯದ ಪೆದ್ದಪಲ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಉದ್ಯೋಗದಲ್ಲಿದ್ದ 55 ವರ್ಷದ ತಂದೆಯನ್ನು ಟವೆಲ್‌ನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿ, ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಕಥೆ ಕಟ್ಟಿದ್ದರು.

ಹತ್ಯೆ ಮಾಡಿದ 25 ವರ್ಷದ ಡಿಪ್ಲೋಮಾ ಪಧವೀಧರ ಮತ್ತು ಆತನ ತಮ್ಮನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯ ಪತ್ನಿ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಆರೋಪಿಗಳಿಂದ 2 ಮೊಬೈಲ್, ಕೃತ್ಯಕ್ಕೆ ಬಳಸಿದ್ದ ಟವೆಲ್ ವಶಪಡಿಸಿಕೊಳ್ಳಲಾಗಿದೆ.

Man Kills Father To Get Job Under Compassionate Grounds

ಮೇ 26ರ ರಾತ್ರಿ ತಾಯಿಯ ಸಹಾಯದಿಂದ ತಂದೆಯನ್ನು ಕೊಂದ ಮಕ್ಕಳು ಬೆಳಗ್ಗೆ ಅಕ್ಕಪಕ್ಕದ ಮನೆಯವರಿಗೆ ಹೃದಯಾಘಾತದಿಂದ ಮೃತಪಟ್ಟರು ಎಂದು ಮಾಹಿತಿ ನೀಡಿದ್ದರು. ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು.

ಕೆಲವು ಜನರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡುವಂತೆ ಒತ್ತಾಯಿಸಿದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದಾಗ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+