ತೆಲಂಗಾಣದಲ್ಲಿ ಸಚಿವ ಪ್ರಭು ಚೌಹಾಣ್ ಕಾರು ಪಲ್ಟಿ

ಹೈದರಾಬಾದ್, ಫೆಬ್ರವರಿ 27: ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್‌ನಲ್ಲಿ ಬಳಿ ನಡೆದಿದೆ.ಅವರ ಸ್ವಂತ ಕಾರಾದ ಫಾರ್ಚುನರ್​ನಲ್ಲಿ ಅವರ ಗನ್​ ಮ್ಯಾನ್​ ಮತ್ತು ಕೆಲ ಕಾರ್ಯಕರ್ತರು ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಅವರ ಸ್ವಂತ ಕಾರಿನ ನಿಯಂತ್ರಣ ತಪ್ಪಿದ್ದು ಪಲ್ಟಿಯಾಗಿ ಬಿದ್ದಿದೆ.

ಸಚಿವರು ಬೀದರ್​ನಿಂದ ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಸರ್ಕಾರಿ ಗಾಡಿಯಲ್ಲಿ ಸಚಿವರು ಸಂಚರಿಸುತ್ತಿದ್ದರು. ರಸ್ತೆಯಲ್ಲಿ ಅವರ ಸ್ವಂತ ಕಾರಿನ ನಿಯಂತ್ರಣ ತಪ್ಪಿದ್ದು ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣ ಪುಟ್ಟ ಗಾಯಗಳಾಗಿರುವುದು ವರದಿಯಾಗಿದೆ.

Minister Prabhu Chauhan Car Accident In Telangana

ಕಳೆದ ಎರಡು ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಚಲಾಯಿಸುತ್ತಿದ್ದ ಕಾರು ಪಲ್ಟಿಯಾಗಿತ್ತು. ಅವರು ಕುಟುಂಬ ಸಮೇತರಾಗಿ ಗೋವಾಕ್ಕೆ ಹೋಗಿದ್ದು, ಮಂಗಳವಾರ ಅಲ್ಲಿಂದ ವಾಪಸಾಗುತ್ತಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಶಾಸಕರೇ ಕಾರು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+