ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೆಟ್ರೋಲ್ ಸುರಿದು ಹತ್ಯೆ ಯತ್ನ

ಹೈದರಾಬಾದ್, ಮಾರ್ಚ್ 01 : ದಿಶಾ ಮಾದರಿಯ ಮತ್ತೊಂದು ಕೃತ್ಯ ತೆಲಂಗಾಣದಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ, ಪೆಟ್ರೋಲ್ ಸುರಿದು ಹತ್ಯೆ ಮಾಡಲು ಯತ್ನಿಸಲಾಗಿದೆ. ಆಸ್ಪತ್ರೆಯಲ್ಲಿ ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿದ್ದಾಳೆ.

ತೆಲಂಗಾಣ ರಾಜ್ಯದ ಸೂರ್ಯಪೇಟ್ ಜಿಲ್ಲೆಯ ತಿರುಮಲಗಿರಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. 17 ಯುವತಿ ಮೇಲೆ ಅದೇ ಗ್ರಾಮದ ವೆಂಕಟೇಶ್ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಪೆಟ್ರೋಲ್ ಸುರಿದು ಆಕೆಯನ್ನು ಹತ್ಯೆ ಮಾಡಲು ಪ್ರಯತ್ನ ನಡೆಸಿದ್ದಾನೆ.

ಯುವತಿಯ ತಂದೆ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ. ಯುವತಿಯನ್ನು ಪ್ರೀತಿಸುವುದಾಗಿ ಆತ ಪೀಡಿಸುತ್ತಿದ್ದ, ಯುವತಿ ನಿರಾಕರಿಸಿದ್ದಳು. ತಿರುಮಲಗಿರಿ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಪಂಚಾಯಿತಿ ನಡೆಸಿ ಯುವಕನಿಗೆ ಎಚ್ಚರಿಕೆ ನೀಡಲಾಗಿತ್ತು.

rape

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ವಾರಂಗಲ್‌ನಲ್ಲಿರುವ ಮಹಾತ್ಮ ಗಾಂಧಿ ಮೆಮೊರಿಯಲ್ ಆಸ್ಪತ್ರೆಯ ಐಸಿಯುನಲ್ಲಿ ಸಂತ್ರಸ್ತ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಯುವತಿಯ ತಂದೆ ಕೂಲಿ ಕೆಲಸ ಮಾಡುತ್ತಾರೆ. ಶುಕ್ರವಾರ ಯುವತಿಯನ್ನು ಆರೋಪಿ ವೆಂಕಟೇಶ್ ಹಿಂಬಾಲಿಸಿದ್ದ. ರಾತ್ರಿ 8.30ರ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲ ಎಂಬುದು ತಿಳಿದಿದ್ದ. ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಬೆಂಕಿ ಹಚ್ಚಿದ್ದ.

ಪೊಲೀಸರು ಆರೋಪಿ ವೆಂಕಟೇಶ್‌ನನ್ನು ಬಂಧಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಸೇರಿದಂತೆ ಐಪಿಸಿ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಕಾಯ್ದೆ ಅಡಿ ಆರೋಪಿ ವಿರುದ್ಧ ಹಲವು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

2019ರ ನವೆಂಬರ್ 27ರಂದು ಹೈದರಾಬಾದ್ ಹೊರವಲಯದಲ್ಲಿ 27 ವರ್ಷದ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಬಳಿಕ ಪೆಟ್ರೋಲ್ ಸುರಿದು ಆಕೆಯನ್ನು ಹತ್ಯೆ ಮಾಡಿದ್ದರು. ಡಿಸೆಂಬರ್ 6ರಂದು ಎಲ್ಲಾ ಆರೋಪಿಗಳು ಪೊಲೀಸ್ ಎನ್‌ ಕೌಂಟರ್‌ನಲ್ಲಿ ಮೃತಪಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+