ತೆಲಂಗಾಣ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಮೊಹಮ್ಮದ್ ಅಜರುದ್ದಿನ್ ಆಯ್ಕೆ
ಹೈದರಾಬಾದ್, ನವೆಂಬರ್ 30: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದಿನ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.
ಟಿಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಿಫಾರಸ್ಸು ಮಾಡಲಾಗಿದ್ದ ಅಜರುದ್ದಿನ್ ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮೂದಿಸಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೂ ಮುನ್ನ ಅಜರುದ್ದಿನ್ ಅವರಿಗೆ ಜವಾಬ್ದಾರಿಯುತ ಹುದ್ದೆ ದೊರಕಿದಂತಾಗಿದೆ.

1989 ರಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಅಜರುದ್ದಿನ್ ಅವರಿಗೆ ಈಗ 55 ವರ್ಷ ವಯಸ್ಸು. ಕ್ರಿಕೆಟ್ ಬದುಕಿನ ನಂತರ 2009 ರ ಫೆಬ್ರವರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ ಅಜರುದ್ದಿನ್, 2009 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೊರದಾಬಾದ್ ನಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು.












Click it and Unblock the Notifications