ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಆರ್‌ಸಿ ಆಯಿತು, ಎನ್‌ಪಿಆರ್‌ಗೂ ಓವೈಸಿ ವಿರೋಧ

|
Google Oneindia Kannada News

ಹೈದರಾಬಾದ್, ಡಿಸೆಂಬರ್ 25: ರಾಷ್ಟ್ರೀಯ ನಾಗರಿಕ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ವಿರೋಧಿಸಿದ್ದ ಎಐಎಐಎಂ ಪಕ್ಷದ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ವಿರುದ್ಧವೂ ಕಿಡಿಕಾರಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ: ಕಲ್ಲು ಹೊಡೆಯುವವರ ಬಗ್ಗೆ ಮೋದಿ ಹೇಳಿದ್ದೇನು?ಪೌರತ್ವ ತಿದ್ದುಪಡಿ ಕಾಯ್ದೆ: ಕಲ್ಲು ಹೊಡೆಯುವವರ ಬಗ್ಗೆ ಮೋದಿ ಹೇಳಿದ್ದೇನು?

ಈ ಕುರಿತು ಸುದ್ದಿಗಾರರೊಂದಿಗೆ ಹೈದರಾಬಾದ್‌ನಲ್ಲಿ ಮಾತನಾಡಿರುವ ಅವರು, ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ಮೂಲಕ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ ಷಾ ಅವರು ದೇಶವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಬಿಜೆಪಿಯೇತರ ಪಕ್ಷಗಳು ಇದರ ವಿರುದ್ಧವೂ ಹೋರಾಟ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ. ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ನಡುವೆ ಯಾವ ವ್ಯತ್ಯಾಸವೂ ಇಲ್ಲ. ಎನ್‌ಪಿಆರ್ ತರುತ್ತಿರುವುದು ಅಮಿತ ಷಾ ಹೊಸ ನಾಟಕ ಎಂದು ಹೇಳಿದ್ದಾರೆ.

MP Asaduddin Owaisi Opposes National Population Register NPR

ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ತಕ್ಕ ಮಟ್ಟಿಗೆ ಮಣದಿರುವ ಅಮಿತ್ ಷಾ ಅವರು, ನಾನು ಎನ್‌ ಆರ್‌ಸಿ ಯನ್ನು ದೇಶದ ತುಂಬ ನಡೆಸುತ್ತೇನೆ ಎಂದು ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ನಡೆಸುತ್ತೇವೆ ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡು ಯೋಜನೆಗೆ ೬ ಸಾವಿರ ಕೋಟಿ ರುಪಾಯಿ ಮೀಸಲು ಇಟ್ಟಿದ್ದಾರೆ. ಇದು ಪ್ರತಿಪಕ್ಷಗಳನ್ನು ಕೆರಳಿಸಿದೆ.

English summary
MP Asaduddin Owaisi Opposes National Population Register NPR. There is no difference between National Population Register(NPR) & National Register of Citizens(NRC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X