• search
 • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

|

ಹೈದರಾಬಾದ್, ಜನವರಿ 4: ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ.

ನವದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬರುತ್ತಿತ್ತು. ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಬಂದಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರೂ ಸುರಕ್ಷಿತರಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

Video: ರೈಲ್ವೆ ಕಾಮಗಾರಿ ವೀಕ್ಷಣೆ ವೇಳೆ ಶೆಟ್ಟರ್ ಅಪಾಯದಿಂದ ಪಾರು

ಲೋಕೊಮೋಟಿವ್‌ನಲ್ಲಿ ಹೊಗೆ ಬರುತ್ತಿರುವುದನ್ನು ಲೋಕೊಪೈಲಟ್ ಗಮನಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಅವರು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ಎಂಜಿನ್‌ನ ಸ್ವಲ್ಪ ಪ್ರಮಾಣ ಆವರಿಸಿತ್ತು. ಕೂಡಲೇ ಬೋಗಿಗಳಿಂದ ಎಂಜಿನ್‌ಅನ್ನು ಬೇರ್ಪಡಿಸಿದ್ದಾರೆ ಎಂದು ದಕ್ಷಿಣ ಕೇಂದ್ರ ರೈಲ್ವೆಯ ಅಧಿಕಾರಿ ಸಿ.ಎಚ್. ರಾಕೇಶ್ ತಿಳಿಸಿದ್ದಾರೆ.

   ರೋಹಿತ್ ಶರ್ಮಾ ವಿರುದ್ಧ ನಮ್ಮ ಯೋಜನೆ ಸಿದ್ಧವಾಗಿದೆ ಎಂದ ಆಸಿಸ್ ಸ್ಪಿನ್ನರ್ | Oneindia Kannada

   ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ರೈಲು ನಿಲ್ದಾಣದಲ್ಲಿ ನಿಂತಿತ್ತು. ತಂದುರ್ ಅಗ್ನಿಶಾಮಕದ ವಿಭಾಗದ ತಂಡ ಕೂಡಲೇ ಅಲ್ಲಿಗೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿತು. ಎಂಜಿನ್ ಬದಲಾವಣೆ ಮಾಡಿಕೊಂಡ ಬಳಿಕ ರಾಜಧಾನಿ ಎಕ್ಸ್‌ಪ್ರೆಸ್ ಅಲ್ಲಿಂದ ತಡವಾಗಿ ಸಂಚರಿಸಿತು.

   English summary
   A minor fire broke out in the engine of New Delhi-Bengaluru Rajdhani Express train near Vikarabad district of Telangana on Sunday night.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X