• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್

|

ಹೈದರಾಬಾದ್, ಡಿಸೆಂಬರ್ 21: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.

ಮಾವೋವಾದಿಗಳಿಗೆ ಬೆಂಬಲ, ದಿಗ್ವಿಜಯ್ ಸಿಂಗ್ ವಿಚಾರಣೆ ಸಾಧ್ಯತೆ!

ತೆಲಂಗಾಣದ ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಅವರ ವಿರುದ್ಧ ಮಾನಹಾನಿಯುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪ ದಿಗ್ವಿಜಯ್ ಸಿಂಗ್ ಅವರ ಮೇಲಿತ್ತು.

ವಿವಾದಿತ ಸ್ಥಳದಲ್ಲಿಯೇ ರಾಮಮಂದಿರ ಕಟ್ಟಲು ಬಿಜೆಪಿ ಏಕೆ ಬಯಸುತ್ತಿದೆ?

ಅಸಾದುದ್ದೀನ್ ಓವೈಸಿ ಅವರು ಹಣಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು.

ಅದರ ವಿರುದ್ಧ ಓವೈಸಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈದರಾಬಾದ್‌ನ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ನಾನು ಪ್ರಚಾರ ಮಾಡಿದರೆ ಮ.ಪ್ರ.ದಲ್ಲಿ ಕಾಂಗ್ರೆಸ್ ಸೋಲುತ್ತದೆ: ದಿಗ್ವಿಜಯ್ ಸಿಂಗ್

ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಗೆ ದಿಗ್ವಿಜಯ್ ಸಿಂಗ್ ನಿರಂತರವಾಗಿ ಗೈರು ಹಾಜರಾಗಿದ್ದರು. ಹೀಗಾಗಿ ಅವರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ.

English summary
Hyderabad Nampalli's ACMM court has issued a non bailable warrant against congress leader Digvijay Singh in defamation case by Asaduddin Owaisi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X