ನೀಟ್ ಪರೀಕ್ಷೆ ಫಲಿತಾಂಶ : ಹೈದರಾಬಾದ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಹೈದರಾಬಾದ್, ಜೂನ್ 05 : ನೀಟ್ ಪರೀಕ್ಷೆ ಫಲಿತಾಂಶದ ಬಳಿಕ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಜಸ್ಲಿನ್ ಕೌರ್ (18) ಎಂದು ಗುರುತಿಸಲಾಗಿದೆ. ಹೈದರಾಬಾದ್‌ನ ಮಯೂರಿ ಕಾಂಪ್ಲೆಕ್ಸ್‌ನಿಂದ ಬಿದ್ದು, ಜಸ್ಲಿನ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಚಿಗುಡ ಪದೇಶದಲ್ಲಿ ವಾಸವಾಗಿದ್ದ ಜಸ್ಲಿನ್ ಇಂದು ಬೆಳಗ್ಗೆ 10.30ರ ವೇಳೆಗೆ ಮಯೂರಿ ಕಾಂಪ್ಲೆಕ್ಸ್‌ನ 10ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Not Getting Good NEET Rank Hyderabad Girl commits suicide

ಜಸ್ಲಿನ್ ಕೌರ್ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆದಿದ್ದರು. ಸೋಮವಾರ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಪಾಸ್ ಆದರೂ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಸ್ಲಿನ್ ಕೌರ್ ಮಯೂರಿ ಕಾಂಪ್ಲೆಕ್ಸ್‌ಗೆ ಹೋಗುತ್ತಿರುವ ದೃಶ್ಯ ಮತ್ತು ಮಹಡಿಯಿಂದ ಕೆಳಗೆ ಜಿಗಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+