ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ಪರೀಕ್ಷೆ ಫಲಿತಾಂಶ : ಹೈದರಾಬಾದ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

By Gururaj
|
Google Oneindia Kannada News

ಹೈದರಾಬಾದ್, ಜೂನ್ 05 : ನೀಟ್ ಪರೀಕ್ಷೆ ಫಲಿತಾಂಶದ ಬಳಿಕ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಜಸ್ಲಿನ್ ಕೌರ್ (18) ಎಂದು ಗುರುತಿಸಲಾಗಿದೆ. ಹೈದರಾಬಾದ್‌ನ ಮಯೂರಿ ಕಾಂಪ್ಲೆಕ್ಸ್‌ನಿಂದ ಬಿದ್ದು, ಜಸ್ಲಿನ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಸಿಬಿಎಸ್ಇನೀಟ್ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಸಿಬಿಎಸ್ಇ

ಕಾಚಿಗುಡ ಪದೇಶದಲ್ಲಿ ವಾಸವಾಗಿದ್ದ ಜಸ್ಲಿನ್ ಇಂದು ಬೆಳಗ್ಗೆ 10.30ರ ವೇಳೆಗೆ ಮಯೂರಿ ಕಾಂಪ್ಲೆಕ್ಸ್‌ನ 10ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Not Getting Good NEET Rank Hyderabad Girl commits suicide

ಜಸ್ಲಿನ್ ಕೌರ್ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆದಿದ್ದರು. ಸೋಮವಾರ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಪಾಸ್ ಆದರೂ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೀಟ್‌ ಪರೀಕ್ಷೆಗೆ ವಸ್ತ್ರ ಸಂಹಿತೆ: ವಿದ್ಯಾರ್ಥಿಗಳಿಂದ ಭಾರಿ ಟೀಕೆ ವ್ಯಕ್ತ!ನೀಟ್‌ ಪರೀಕ್ಷೆಗೆ ವಸ್ತ್ರ ಸಂಹಿತೆ: ವಿದ್ಯಾರ್ಥಿಗಳಿಂದ ಭಾರಿ ಟೀಕೆ ವ್ಯಕ್ತ!

ಜಸ್ಲಿನ್ ಕೌರ್ ಮಯೂರಿ ಕಾಂಪ್ಲೆಕ್ಸ್‌ಗೆ ಹೋಗುತ್ತಿರುವ ದೃಶ್ಯ ಮತ್ತು ಮಹಡಿಯಿಂದ ಕೆಳಗೆ ಜಿಗಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

English summary
A 18-year-old girl jumped to death from a building on Tuesday allegedly after failing to get a good rank in the NEET exam. The girl identified as Jasleen Kaur jumped from top of the 10-storey shopping complex
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X