ತೆಲಂಗಾಣ: 100ಕ್ಕೂ ಅಧಿಕ ಬೀದಿನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ
ಹೈದರಾಬಾದ್, ಮಾರ್ಚ್ 30: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100 ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಲಾಗಿದೆ. ಈ ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಎಂಬುವರು ಈ ಬಗ್ಗೆ ದೂರು ಸಲ್ಲಿಕೆ ಮಾಡಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಜಗದೇವಪುರ ಮಂಡಲದ ತಿಗುಲ್ ಗ್ರಾಮದಲ್ಲಿ ನಾಯಿಗಳ ಸಾಮೂಹಿಕ ಹತ್ಯೆ ನಡೆದಿದೆ ಎಂಬ ಆರೋಪವನ್ನು ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಮಾಡಿದ್ದಾರೆ.
ಹಾಗೆಯೇ ಈ ಸಂದರ್ಭದಲ್ಲೇ ಗ್ರಾಮದ ಸರಪಂಚ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಈ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿಸಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ದೂರಿನ ಆಧಾರದಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಗ್ರಾಮದ ಸರಪಂಚ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೃತ್ತಿಪರ ನಾಯಿ ಹಿಡಿಯುವವರನ್ನು ನೇಮಿಸಿ ಬೀದಿ ನಾಯಿಗಳಿಗೆ ಮಾ.27ರಂದು ವಿಷ ಚುಚ್ಚುಮದ್ದು ನೀಡಿ ಕೊಂದು ಹಾಕಿದ್ದಾರೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತ ತಾನು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಕೂಡಾ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವುದನ್ನು ಕಂಡು ಬಂದಿದೆ. ಈ ಕುರಿತು ಸಿದ್ದಿಪೇಟೆ ಜಿಲ್ಲಾಧಿಕಾರಿ ಹಾಗೂ ಸಿದ್ದಿಪೇಟೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದ ಸರಪಂಚ್ ಮತ್ತು ಕಾರ್ಯದರ್ಶಿಯನ್ನು ಅಮಾನತು ಮಾಡುವಂತೆ ಕೋರಿರುವುದಾಗಿ ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಹೇಳಿದ್ದಾರೆ.
ಒಡಿಶಾದಲ್ಲೂ ನಡೆದಿತ್ತು ಇದೇ ರೀತಿಯ ಘಟನೆ
ಭಾರತದ ಪೂರ್ವ ಒಡಿಶಾ ರಾಜ್ಯವಾದ ಒಡಿಶಾದಲ್ಲಿ ಕಳೆದ ವರ್ಷ ಕನಿಷ್ಠ 20 ನಾಯಿಗಳಿಗೆ ವಿಷ ನೀಡಿದ 24 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆ ಪ್ರದೇಶದಲ್ಲಿನ ಹಳ್ಳದಲ್ಲಿ ನಾಯಿ ಮೃತದೇಹಗಳನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
ರಾತ್ರಿಯಲ್ಲಿ ನಾಯಿಗಳು ಬೊಗಳುತ್ತದೆ. ಅದು ನನಗೆ ಕಿರಿಕಿರಿ ಉಂಟು ಮಾಡುತ್ತದೆ. ಅದಕ್ಕಾಗಿ ಅವುಗಳಿಗೆ ವಿಷ ನೀಡಲು ನಿರ್ಧರಿಸಿದೆ," ಎಂದು ಸಿಹಿತಿಂಡಿ ಮಾರಾಟಗಾರ ಪೊಲೀಸರಿಗೆ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications