ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ: 100ಕ್ಕೂ ಅಧಿಕ ಬೀದಿನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ

|
Google Oneindia Kannada News

ಹೈದರಾಬಾದ್‌, ಮಾರ್ಚ್ 30: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100 ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಲಾಗಿದೆ. ಈ ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಎಂಬುವರು ಈ ಬಗ್ಗೆ ದೂರು ಸಲ್ಲಿಕೆ ಮಾಡಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಜಗದೇವಪುರ ಮಂಡಲದ ತಿಗುಲ್ ಗ್ರಾಮದಲ್ಲಿ ನಾಯಿಗಳ ಸಾಮೂಹಿಕ ಹತ್ಯೆ ನಡೆದಿದೆ ಎಂಬ ಆರೋಪವನ್ನು ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಮಾಡಿದ್ದಾರೆ.

ಭದ್ರಾವತಿಯಲ್ಲಿ ಬೀದಿ ನಾಯಿಗಳ ಹತ್ಯೆ; ದೂರು ದಾಖಲುಭದ್ರಾವತಿಯಲ್ಲಿ ಬೀದಿ ನಾಯಿಗಳ ಹತ್ಯೆ; ದೂರು ದಾಖಲು

ಹಾಗೆಯೇ ಈ ಸಂದರ್ಭದಲ್ಲೇ ಗ್ರಾಮದ ಸರಪಂಚ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಈ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿಸಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್‌ ದೂರಿನ ಆಧಾರದಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Over 100 Stray Dogs Poisoned In Telangana Village, Case Filed Says Activist

ಗ್ರಾಮದ ಸರಪಂಚ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೃತ್ತಿಪರ ನಾಯಿ ಹಿಡಿಯುವವರನ್ನು ನೇಮಿಸಿ ಬೀದಿ ನಾಯಿಗಳಿಗೆ ಮಾ.27ರಂದು ವಿಷ ಚುಚ್ಚುಮದ್ದು ನೀಡಿ ಕೊಂದು ಹಾಕಿದ್ದಾರೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತ ತಾನು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಕೂಡಾ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವುದನ್ನು ಕಂಡು ಬಂದಿದೆ. ಈ ಕುರಿತು ಸಿದ್ದಿಪೇಟೆ ಜಿಲ್ಲಾಧಿಕಾರಿ ಹಾಗೂ ಸಿದ್ದಿಪೇಟೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದ ಸರಪಂಚ್ ಮತ್ತು ಕಾರ್ಯದರ್ಶಿಯನ್ನು ಅಮಾನತು ಮಾಡುವಂತೆ ಕೋರಿರುವುದಾಗಿ ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಹೇಳಿದ್ದಾರೆ.

ಮಂಗಳೂರು; ಗುಂಡು ಹಾರಿಸಿ ಬೀದಿ ನಾಯಿ ಹತ್ಯೆಮಂಗಳೂರು; ಗುಂಡು ಹಾರಿಸಿ ಬೀದಿ ನಾಯಿ ಹತ್ಯೆ

ಒಡಿಶಾದಲ್ಲೂ ನಡೆದಿತ್ತು ಇದೇ ರೀತಿಯ ಘಟನೆ

ಭಾರತದ ಪೂರ್ವ ಒಡಿಶಾ ರಾಜ್ಯವಾದ ಒಡಿಶಾದಲ್ಲಿ ಕಳೆದ ವರ್ಷ ಕನಿಷ್ಠ 20 ನಾಯಿಗಳಿಗೆ ವಿಷ ನೀಡಿದ 24 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆ ಪ್ರದೇಶದಲ್ಲಿನ ಹಳ್ಳದಲ್ಲಿ ನಾಯಿ ಮೃತದೇಹಗಳನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ರಾತ್ರಿಯಲ್ಲಿ ನಾಯಿಗಳು ಬೊಗಳುತ್ತದೆ. ಅದು ನನಗೆ ಕಿರಿಕಿರಿ ಉಂಟು ಮಾಡುತ್ತದೆ. ಅದಕ್ಕಾಗಿ ಅವುಗಳಿಗೆ ವಿಷ ನೀಡಲು ನಿರ್ಧರಿಸಿದೆ," ಎಂದು ಸಿಹಿತಿಂಡಿ ಮಾರಾಟಗಾರ ಪೊಲೀಸರಿಗೆ ತಿಳಿಸಿದ್ದಾರೆ.

English summary
Over 100 Stray Dogs Poisoned In Telangana Village, Case Filed Says Activist Goutham.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X