ತೆಲಂಗಾಣದಿಂದ ಕಾಂಗ್ರೆಸ್, ಬಿಜೆಪಿ ಕಿತ್ತೊಗೆಯಲು ಓವೈಸಿ ಸಂಕಲ್ಪ

ಹೈದರಾಬಾದ್, ಮಾರ್ಚ್ 02: ತೆಲಂಗಾಣದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷವನ್ನು ಕಿತ್ತೊಗೆಯಬೇಕು ಎಂದು ಎಐಎಂಐಎಂ (All India Majlis-e-Ittehad-ul Muslimeen ) ನಾಯಕ ಅಸಾದುದ್ದಿನ್ ಓವೈಸಿ ಕರೆ ನೀಡಿದ್ದಾರೆ.

ತೆಲಂಗಾಣದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಏರ್ಪಡಿಸಿದ್ದ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ಅವರು, ತೆಲಂಗಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಬುಡ ಸಮೇತ ಕಿತ್ತೆಸೆಯಬೇಕಿದೆ. ಅದಕ್ಕಾಗಿ ನಾವು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡಬೇಕಿದೆ ಎಂದರು.

2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ಪಕ್ಷವನ್ನು ಬುಡಮಟ್ಟದಲ್ಲಿ ಬಲಗೊಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

Owaisi urges party workers to uproot BJP, Cong from Telangana

ನಮ್ಮ ಪಕ್ಷದ ಶಾಸಕರನ್ನು ಹೆಚ್ಚಿಸಲು ಸಂಕಲ್ಪ ಮಾಡೋಣ. ಅದಕ್ಕಾಗಿ ಎಲ್ಲ ಕಾರ್ಯಕರ್ತರು ಪಣತೊಡಬೇಕಿದೆ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+