Breaking: ಮೋದಿ ಇದ್ದ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟ ಕಾಂಗ್ರೆಸ್ ಕಾರ್ಯಕರ್ತರು

ರಾಜ್ಯದ ಭೀಮಾವರಂನಲ್ಲಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ವರ್ಷಾಚರಣೆಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ, ಪ್ರಧಾನಿ ಮೋದಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಇನ್ನೂ ಕೆಲವರನ್ನು ಬಂಧಿಸಬೇಕಿದೆ ಎಂದು ಕೃಷ್ಣಾ ಜಿಲ್ಲೆಯ ಡಿಎಸ್ಪಿ ವಿಜಯ್ ಪಾಲ್ ತಿಳಿಸಿದ್ದಾರೆ. ಬಂಧಿತ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದರು.

ಗನ್ನವರಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನದ ವೇಳೆ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿ ಮೋದಿ ವಿಮಾನ ನಿಲ್ದಾಣದಿಂದ ಚಾಪರ್ ಮೂಲಕ ನಿರ್ಗಮಿಸಿದ ಐದು ನಿಮಿಷಗಳ ನಂತರ ಬಲೂನ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

PM Modi Andhra Visit : Congress Worker Release Balloons Close To PM Modis Chopper

ಅಲ್ಲೂರಿ ಸೀತಾರಾಮ ರಾಜು 125 ನೇ ಜನ್ಮದಿನಾಚರಣೆಯ ಅಂಗವಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಶ್ರೀಮಂತ ಪರಂಪರೆಯನ್ನು ಹೊಂದಿರುವ ಆಂಧ್ರಪ್ರದೇಶದ ಭೂಮಿಗೆ ನಮನ ಸಲ್ಲಿಸುವ ಅವಕಾಶವನ್ನು ಪಡೆದಿರುವುದು ನನಗೆ ಸೌಭಾಗ್ಯ ಎಂದು ಭಾವಿಸುತ್ತೇನೆ," ಎಂದರು.

PM Modi Andhra Visit : Congress Worker Release Balloons Close To PM Modis Chopper

ಇಂದಿನ ಕಾರ್ಯಕ್ರಮವು ದೇಶದ ಸ್ವಾತಂತ್ರ್ಯ ಹೋರಾಟಗಾರರ ವೀರ ಕಾರ್ಯಗಳ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವ ಪ್ರತಿಜ್ಞೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+