• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೈದರಾಬಾದ್‌ನ ಭಾರತ್ ಬಯೋಟೆಕ್ ಕೊರೊನಾ ಲಸಿಕೆ ಕೇಂದ್ರಕ್ಕೆ ಮೋದಿ ಭೇಟಿ

|

ಹೈದರಾಬಾದ್, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಕೊರೊನಾ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ಖುದ್ದು ಅವಲೋಕನ ನಡೆಸುತ್ತಿದ್ದಾರೆ.

ಹಾಗೆಯೇ ಹೈದರಾಬಾದಿನಲ್ಲಿರುವ ಕೊರೊನಾ ಲಸಿಕೆ ಅಭಿವೃದ್ಧಿ ಕೇಂದ್ರ ಭಾರತ್ ಬಯೋಟೆಕ್‌ಗೂ ಭೇಟಿ ನೀಡಿದ್ದಾರೆ.

ಝೈಕೋವ್-ಡಿ ಲಸಿಕೆ ಉತ್ಪಾದನೆ ವೀಕ್ಷಿಸಿದ ಪ್ರಧಾನಿ ಮೋದಿ

ಇದಕ್ಕೂ ಮೊದಲು ಅಹಮದಾಬಾದಿನಿಂದ 20 ಕಿ.ಮೀ ದೂರದಲ್ಲಿರುವ ಝೈಡಸ್ ಬಯೋಟೆಕ್ ಪಾರ್ಕ್‌ ಗೆ ತೆರಳಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಝೈಡಸ್ ಕ್ಯಾಡಿಲಾ ಕಂಪನಿಯು ಈಗಾಗಲೇ ಕೊರೋನಾಗೆ ಝೈಕೋವಿಡ್-ಡಿ ಎಂಬ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಅದು 2ನೇ ಹಂತ ಪೂರ್ಣಗೊಳಿಸಿದೆ ಎಂದು ತಿಳಿದುಬಂದಿದೆ.

ಸೀರಂ ಇನ್ ಸ್ಟಿಟ್ಯೂಟ್ ಬ್ರಿಟನ್'ನ ಆಕ್ಸ್'ಫರ್ಡ್ ವಿವಿ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸುವ ಮತ್ತು ಪ್ರಯೋಗಕ್ಕೆ ಒಳಪಡಿಸುವ ಗುತ್ತಿಗೆ ಪಡೆದುಕೊಂಡಿದೆ.

ಮೋದಿ ಹೈದರಾಬಾದ್'ನಿಂದ 50 ಕಿ.ಮೀ ದೂರದ ಹಕೀಂಪೇಟ್ ನಲ್ಲಿರುವ ಭಾರತ್ ಬಯೋಟೆಕ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಪುಣೆಗೆ ತೆರಳಲಿದ್ದಾರೆ. ಅಲ್ಲಿ ಸೆರಮ್ ಸಂಸ್ಥೆಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಉತ್ಪಾದಿಸುತ್ತಿರುವ ಕೋವಿಶೀಲ್ಡ್ ಲಸಿಕೆಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

English summary
Prime minister Narendra Modi visited vaccine maker Bharat Biotech's facility in Hydrebad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X