ಸಾಮಾಜಿಕ ಅಂತರದಿಂದ ಏನಾಗುತ್ತೆ? ಅತ್ಯುತ್ತಮ ಉದಾಹರಣೆ ಇಲ್ಲಿದೆ!
ವಿಶ್ವದಾದ್ಯಂತ ಮಹಾಮಾರಿ ಕೊರೊನಾ ವೈರಸ್ ಬೆಂಬಿಡದೆ ಕಾಡುತ್ತಿದೆ. ಜಗತ್ತಿನ 186 ದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡಿದೆ. ಸೋಂಕನ್ನು ತಡೆಗಟ್ಟಲು ವಿವಿಧ ದೇಶಗಳು, ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಅದರಲ್ಲಿ ಬಹುಮುಖ್ಯವಾದದ್ದು 'ಸಾಮಾಜಿಕ ಅಂತರ'.
ಕೋವಿಡ್-19 ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿರುವ ಕಾರಣ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಲ್ಲಾ ವೈದ್ಯರು ಸೂಚಿಸುತ್ತಿದ್ದಾರೆ. ''ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಏನೂ ಪ್ರಯೋಜನ ಇಲ್ಲ'' ಎಂದು ಮೂಗು ಮುರಿಯುವವರು ಒಮ್ಮೆ ಈ ವಿಡಿಯೋ ನೋಡಿ...
Proof that social distancing works pic.twitter.com/hEh7BV9OjC
— Ram Gopal Varma (@RGVzoomin) March 20, 2020
ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿರುವ ಈ ವಿಡಿಯೋದಲ್ಲಿ ಒಂದು ಬೆಂಕಿ ಕಡ್ಡಿಯಿಂದ ಇನ್ನೊಂದು ಬೆಂಕಿ ಕಡ್ಡಿಗೆ ಕಿಡಿ ಹೇಗೆ ತಗುಲುತ್ತೆ, ಮತ್ತು ಎಲ್ಲಾ ಬೆಂಕಿ ಕಡ್ಡಿಗಳಿಗೂ ಕಿಡಿ ಹೊತ್ತಿಕೊಳ್ಳದ ಹಾಗೆ ತಡೆಯಲು ಚೇನ್ ಬ್ರೇಕ್ ಮಾಡಿದರೆ ಸಾಕು ಎಂಬುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಕೊರೊನಾ ವೈರಸ್ ಸೋಂಕು ಕೂಡ ಅಷ್ಟೇ. ಹತ್ತಿರವಿದ್ದರೆ, ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಅಂಟುತ್ತದೆ. ಆದ್ರೆ, ಅಂತರ ಕಾಯ್ದುಕೊಂಡು ಚೇನ್ ಬ್ರೇಕ್ ಮಾಡಿದರೆ ಸೋಂಕು ಹರಡುವುದನ್ನು ತಡೆಗಟ್ಟಬಹುದು.
ಹೀಗಾಗಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ.. ಮನೆಯಲ್ಲಿರಿ.. ಕೊರೊನಾ ಸೋಂಕಿನ ಚೇನ್ ಬ್ರೇಕ್ ಮಾಡಿ.. ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಿ.
-
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications