ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸ್ ಪೇದೆಗೆ ಕೊರೊನಾ ಸೋಂಕು; ಠಾಣೆ ಸಿಬ್ಬಂದಿಗೆ ಕ್ವಾರಂಟೈನ್

|
Google Oneindia Kannada News

ಹೈದರಾಬಾದ್, ಏಪ್ರಿಲ್ 08 : ಹೈದರಾಬಾದ್‌ನ ಸೈಫಾಬಾದ್ ಪೊಲೀಸ್ ಠಾಣೆಯ ಮುಖ್ಯಪೇದೆಗೆ ಕೊರೊನಾ ಸೋಂಕು ತಗುಲಿದೆ. ಪೇದೆಯ ಕುಟುಂಬದವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು, ಠಾಣೆಯ 17 ಸಿಬ್ಬಂದಿಗಳಿಗೆ ಸ್ವಯಂ ಕ್ವಾರಂಟೈನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ.

56 ವರ್ಷದ ಮುಖ್ಯ ಪೇದೆಯನ್ನು ಶನಿವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ನಗರದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬದವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.

ತಬ್ಲೀಗ್ ಮಂದಿಯನ್ನು ಹುಡುಕಲು ಹೋದ 10 ಪೊಲೀಸರಿಗೆ ಕೊರೊನಾ ಸೋಂಕು?ತಬ್ಲೀಗ್ ಮಂದಿಯನ್ನು ಹುಡುಕಲು ಹೋದ 10 ಪೊಲೀಸರಿಗೆ ಕೊರೊನಾ ಸೋಂಕು?

ಮುಖ್ಯಪೇದೆ ಸಂಪರ್ಕಕ್ಕೆ ಬಂದಿದ್ದ ಜನರ ರಕ್ತ, ಗಂಟಲು ದ್ರವದ ಮಾದರಿಯನ್ನು ಸಂಗ್ರಹ ಮಾಡಲಾಗಿದೆ. ಠಾಣೆಯ 17 ಸಿಬ್ಬಂದಿಗಳಿಗೆ ಸ್ವಯಂ ಕ್ವಾರಂಟೈನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ. ಪೇದೆಗೆ ಸೋಂಕು ಹೇಗೆ ಬಂತು ಎಂದು ಪರಿಶೀಲನೆ ನಡೆಸಲಾಗುತ್ತಿದೆ.

Saifabad Police Station Head Constable Tested Positive For COVID 19

ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜನರಿಗೆ ಮನವಿ ಮಾಡಿದ್ದಾರೆ. ನಗರದಲ್ಲಿ ಸಂಚಾರ ನಡೆಸುತ್ತಿರುವ ಅವರು, ಜನರು ಸಾಮಾಜಿಕ ಅಂತರ ಕಾಪಾಡುತ್ತಿಲ್ಲ ಎಂದು ಗಮನಿಸಿದ್ದು, ಜನರಿಗೆ ಕರೆ ಕೊಟ್ಟಿದ್ದಾರೆ.

ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುವವರು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರ ವಿರುದ್ಧ ಪ್ರಕರಣ ದಾಖಲು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಅನಗತ್ಯವಾಗಿ ಸಂಚಾರ ನಡೆಸುವ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ನಗರದಲ್ಲಿ ಕೊರೊನಾ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಜನರ ಜೊತೆ ಸ್ನೇಹದಿಂದ ವರ್ತಿಸಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಸೂಚಿಸಿದ್ದಾರೆ.

ತೆಲಂಗಾಣದಲ್ಲಿ ಮಂಗಳವಾರ 40 ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 404ಕ್ಕೆ ಏರಿಕೆಯಾಗಿದೆ.

English summary
56 year old head constable of the Hyderabad city Saifabad police station has tested positive for the coronavirus. His family members have been put under quarantine. 17 police personnel in the police station were asked to be under self-quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X