• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೆಲಂಗಾಣದಲ್ಲಿ ಅಪಘಾತ; ಏಳು ಕೃಷಿ ಕಾರ್ಮಿಕರ ದುರ್ಮರಣ

|

ತೆಲಂಗಾಣ, ಜನವರಿ 22: ತೆಲಂಗಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, ಹದಿಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗುರುವಾರ ಸಂಜೆ ವೇಳೆ ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಲಾರಿ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ.

ಮಂಜಿನ ದಟ್ಟಣೆಯಿಂದ ಅಪಘಾತ; ಪಶ್ಚಿಮ ಬಂಗಾಳದಲ್ಲಿ 13 ಮಂದಿ ಸಾವು

"ಗುರುವಾರ ಸಂಜೆ 6.30ರ ಸುಮಾರಿಗೆ ಲಾರಿ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಅಪಘಾತ ಸಂಭವಿಸಿದೆ. ಇದರಲ್ಲಿ ಏಳು ಜನ ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ" ಎಂದು ನಲಗೊಂಡ ಎಸ್ ಪಿ ರಂಗನಾಥ್ ಮಾಹಿತಿ ನೀಡಿದ್ದಾರೆ.

20 ಕೃಷಿ ಕಾರ್ಮಿಕರನ್ನು ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದು, ಕೆಲಸ ಮುಗಿಸಿಕೊಂಡು ದೇವರಕೊಂಡದಿಂದ ವಾಪಸ್ ಮನೆಗೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆಘಾತ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

English summary
Seven people including six women dies and 13 injured in lorry-auto accident at telangana nalgonda district on thursday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X