ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಸುಪ್ರೀಂಕೋರ್ಟ್ ಅನುಮತಿ

|
Google Oneindia Kannada News

ಹೈದ್ರಾಬಾದ್, ನವೆಂಬರ್.13: ದೀಪಾವಳಿ ಹೊಸ್ತಿಲಿನಲ್ಲಿ ಪಟಾಕಿ ಮಾರಾಟ ನಿಷೇಧಿಸುವಂತೆ ಆದೇಶಿಸಿದ ತೆಲಂಗಾಣ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಮಾರ್ಪಡಿಸಿದೆ. ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

ಬೆಳಕಿನ ಹಬ್ಬಕ್ಕಾಗಿ ಪಟಾಕಿ ಮಾರಾಟಕ್ಕೆ ಅಣಿಯಾಗಿದ್ದ ವ್ಯಾಪಾರಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತೆಲಂಗಾಣದ ಪಟಾಕಿ ತಯಾರಕರು ಮತ್ತು ವ್ಯಾಪಾರಿಗಳ ಅಸೋಸಿಯೇಷನ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಹಸಿರು ಪಟಾಕಿಗಳ ಮಾರಾಟಕ್ಕೆ ಅನುಮತಿ ನೀಡಿದೆ.

ಪಟಾಕಿ ತಯಾರಿಕೆ, ವ್ಯಾಪಾರ ಮತ್ತು ಬಳಕೆಗೆ ಹೈಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಸಂಪೂರ್ಣ ನಿರ್ಬಂಧ ವಿಧಿಸಿತ್ತು. ದೀಪಾವಳಿಯಲ್ಲಿ ಯಾವುದೇ ರೀತಿ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿತ್ತು.

Supreme Court Allows To Sale And Use Of Green Crackers For Diwali In Telangana

Recommended Video

ಹಾಗಾದ್ರೆ ಈ ಆಟಗಾರರ ಭವಿಷ್ಯ !! | RCB | Oneindia Kannada

ನವೆಂಬರ್.12ರಂದು ಸರ್ಕಾರದ ಆದೇಶ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ದೀಪಾವಳಿಯನ್ನು ಪಟಾಕಿ ಮುಕ್ತವಾಗಿ ಆಚರಿಸುವುದಕ್ಕೆ ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆ ತೆಲಂಗಾಣದಲ್ಲಿ ತತ್ ಕ್ಷಣದಿಂದಲೇ ಪಟಾಕಿ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಸರ್ಕಾರವು ಆದೇಶಿತ್ತು. ಸರ್ಕಾರದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತ್ತು. ಅಲ್ಲದೇ ರಾಜ್ಯದ ಹಲವು ವಿಭಾಗಗಳಲ್ಲಿ ಇರುವ ಹೆಚ್ಚುವರಿ ಪೊಲೀಸ್ ಆಯುಕ್ತರು, ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪಟಾಕಿ ಅಂಗಡಿಗಳನ್ನು ಮುಚ್ಚಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

English summary
Supreme Court Allows To Sale And Use Of Green Crackers For Diwali In Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X