ಕಾರಿಡಾರ್ ಕಾರಣಕ್ಕೆ ಮಾತುಕತೆ ನಡೆಸುತ್ತೇವೆ ಎಂದಲ್ಲ: ಸುಷ್ಮಾ ಖಡಕ್ ಮಾತು

ಹೈದರಾಬಾದ್, ನವೆಂಬರ್ 28: ಭಾರತ-ಪಾಕಿಸ್ತಾನದ ಗಡಿಯಲ್ಲಿ ಕರ್ತರ್ ಪುರ್ ಕಾರಿಡಾರ್ ನಿರ್ಮಿಸುತ್ತಿರುವುದು ಉಭಯ ದೇಶಗಳ ನಡುವೆ ಮಾತುಕತೆ ನಡೆಯಲಿದೆ ಎಂಬುದರ ಅರ್ಥವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಭಯೋತ್ಪಾದನೆ ಮತ್ತು ಮಾತುಕತೆ ಎರಡೂ ಒಟ್ಟಿಗೆ ಸಾಗಲು ಸಾಧ್ಯವಿಲ್ಲ ಎಂದು ಅವರು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.

'ಅನೇಕ ವರ್ಷಗಳಿಂದ ಭಾರತ ಸರ್ಕಾರ ಕರ್ತರ್ ಪುರ ಕಾರಿಡಾರ್‌ಗೆ ಪಾಕಿಸ್ತಾನವನ್ನು ಕೇಳುತ್ತಾ ಬಂದಿದೆ. ಆದರೆ ಪಾಕಿಸ್ತಾನ ಈಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದರ ಅರ್ಥ ಈ ಕಾರಣದಿಂದಾಗಿ ದ್ವಿಪಕ್ಷೀಯ ಮಾತುಕತೆ ಶುರುವಾಗಲಿದೆ ಎಂದಲ್ಲ. ಭಯೋತ್ಪಾದನೆ ಮತ್ತು ಮಾತುಕತೆ ಜತೆಯಾಗಿ ಸಾಗಲಾರವು' ಸುಷ್ಮಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

sushma swaraj kartarpur corridor india pakistan terror and talk

ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪಾಕಿಸ್ತಾನ ನೀಡಿರುವ ಆಹ್ವಾನಕ್ಕೆ ನಾವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿಲ್ಲ. ಪಾಕಿಸ್ತಾನವು ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ನಿಲ್ಲಿಸುವವರೆಗೂ ಯಾವುದೇ ಮಾತುಕತೆ ಇಲ್ಲ. ಹೀಗಾಗಿ ನಾವು ಸಾರ್ಕ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+