ಬೆಂಗಳೂರು ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕು ಶಂಕಿತೆ ಆಂಧ್ರದಲ್ಲಿ ಪತ್ತೆ

ಬೆಂಗಳೂರು, ಮಾರ್ಚ್ 18: ನಗರದ ಸಿವಿ ರಾಮನ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ವೈರಸ್ ಸೋಂಕು ಶಂಕಿತೆ ಆಂಧ್ರಪ್ರದೇಶದ ಅನಂತಪುರದಲ್ಲಿ ಪತ್ತೆಯಾಗಿದ್ದಾರೆ.

ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ಅವರು ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಈ ಬಗ್ಗೆ ಇಂದಿರಾನಗರ ಪೊಲೀಸ್‌ ಠಾಣೆಗೆ ವೈದ್ಯರು ದೂರು ನೀಡಿದ್ದರು.

ಈ ವೇಳೆ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಬಳಿಕ ಅವರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.

The Corona Suspect Who Escaped From The Hospital Was Found In Andhra

ಅನಂತಪುರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕದಿಂದ ಮಹಿಳೆ ವಾಪಸಾಗಿದ್ದರು. ವಿಮಾನ ನಿಲ್ದಾಣದಲ್ಲೇ ತಪಾಸಣೆ ನಡೆಸಲಾಗಿತ್ತು.

ಕೊರೊನಾ ಬಾಧಿತ ದೇಶದಿಂದ ಬಂದಿದ್ದ ಕಾರಣಕ್ಕಾಗಿ ಬಿ ಗುಂಪಿನವರೆಂದು ಗುರುತಿಸಿ ಸರ್ ಸಿವಿ ರಾಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾ ಅವರು ಆಸ್ಪತ್ರೆಯಿಂದ ಓಡಿ ಹೋಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+