Breaking: ಟಿಡಿಪಿ ಸಂಸ್ಥಾಪಕ ಎನ್‌ಟಿ ರಾಮರಾವ್ ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆ!
ಹೈದರಾಬಾದ್,ಆಗಸ್ಟ್. 1: ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿ ರಾಮರಾವ್ ಅವರ ಪುತ್ರಿ ಉಮಾ ಮಹೇಶ್ವರಿ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಉಮಾ ಮಹೇಶ್ವರಿ ಅವರು ಸೋಮವಾರ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮಾ ಮಹೇಶ್ವರಿ ಅವರು ಮಾಜಿ ಸಿಎಂ ಮತ್ತು ಟಿಡಿಪಿ ಪಕ್ಷದ ಸಂಸ್ಥಾಪಕ ಎನ್‌ಟಿಆರ್ ಅವರ ಕಿರಿಯ ಪುತ್ರಿಯಾಗಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ಎಂ ಸುದರ್ಶನ್ ಖಚಿತಪಡಿಸಿದ್ದಾರೆ.

ಉಮಾ ಮಹೇಶ್ವರಿ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮನೆಗೆ ಪೊಲೀಸರು ಬಂದಾಗ ಉಮಾ ಮಹೇಶ್ವರಿ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸೆಕ್ಷನ್ 174 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್‌ಟಿ ರಾಮರಾವ್ ಅವರ 12 ಮಕ್ಕಳಲ್ಲಿ ಉಮಾ ಕಿರಿಯವರಾಗಿದ್ದರು. ಇವರು ನಾಲ್ಕು ಸಹೋದರಿಯರಲ್ಲಿ ಕಿರಿಯರಾಗಿದ್ದರು. ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ದಗ್ಗುಬಾಟಿ ಪುರಂದೇಶ್ವರಿ ಮತ್ತು ಟಿಡಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಅವರ ಸಹೋದರ, ಸಹೋದರಿಯರು. ವಿಷಯ ತಿಳಿದ ಚಂದ್ರಬಾಬು ನಾಯ್ಡು, ಅವರ ಪುತ್ರ ನಾರಾ ಲೋಕೇಶ್ ಮತ್ತು ಇತರ ಕುಟುಂಬ ಸದಸ್ಯರು ಮಹೇಶ್ವರಿ ನಿವಾಸಕ್ಕೆ ದೌಡಾಯಿಸಿದರು ಎಂದು ಮೂಲಗಳು ತಿಳಿಸಿವೆ.












Click it and Unblock the Notifications