ತೆಲಂಗಾಣ: ಬಿಜೆಪಿಯಿಂದ 20 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ಹೈದರಾಬಾದ್, ನವೆಂಬರ್ 16: ಡಿಸೆಂಬರ್ ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತನ್ನ 20 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.

ಈ ಮೂಲಕ ಒಟ್ಟು 119 ಕ್ಷೇತ್ರಗಳಲ್ಲಿ 86 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸಲಾಗಿದೆ. ಅಕ್ಟೋಬರ್ 20 ರಂದು 28 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ನವೆಂಬರ್ 03 ರಂದು ಎರಡನೇ ಪಟ್ಟಿ ಬಿಡುಗಡೆ ಮಾಡಿತ್ತು.

Telanagana BJP releases 3rd list of 20 candidates

ಗುರುವಾರದಂದು ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಸಹ ತನ್ನ 10 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದಕ್ಕೂ ಮುನ್ನ 107 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಟಿಆರ್ ಎಸ್ ಬಿಡುಗಡೆ ಮಾಡಿತ್ತು.

119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+