ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ತೆಲಂಗಾಣದ ಶಾಸಕ ರಾಜಾ ಸಿಂಗ್‌ಗೆ ಜಾಮೀನು

|
Google Oneindia Kannada News

ಹೈದ್ರಾಬಾದ್, ಆಗಸ್ಟ್ 23: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಅನ್ನು ಬಿಡುಗಡೆ ಮಾಡುವಂತೆ 14 ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಇದಕ್ಕೂ ಮೊದಲು ಮಂಗಳವಾರ ವಿಚಾರಣೆ ನಡೆಸಿದ್ದ ಕೋರ್ಟ್, ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜಾಸಿಂಗ್ ಪರ ವಕೀಲರು ಮೇಲ್ಮನವಿಯನ್ನು ಸಲ್ಲಿಸಿದ್ದರು.

ಪ್ರವಾದಿ ವಿರುದ್ಧ ಹೇಳಿಕೆ: ಬಿಜೆಪಿಯಿಂದ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅಮಾನತುಪ್ರವಾದಿ ವಿರುದ್ಧ ಹೇಳಿಕೆ: ಬಿಜೆಪಿಯಿಂದ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅಮಾನತು

ಆಗಸ್ಟ್ 19 ರಂದು ಹೈದರಾಬಾದ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಅವರ ಕಾರ್ಯಕ್ರಮದ ಮೊದಲು ರಾಜಾ ಸಿಂಗ್ ಮತ್ತು ಇತರ 4 ಜನರನ್ನು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಕಳೆದ ವಾರ, ತೆಲಂಗಾಣ ರಾಷ್ಟ್ರ ಸಮಿತಿಯ ಆಡಳಿತದಲ್ಲಿರುವ ತೆಲಂಗಾಣ ಸರ್ಕಾರವು ಫರುಕಿ ನಗರದಲ್ಲಿ ಪ್ರದರ್ಶನ ನೀಡಲು ಅವಕಾಶ ನೀಡಿದರೆ, ಹಾಸ್ಯನಟನ ಮೇಲೆ ಹಲ್ಲೆ ನಡೆಸುವುದಾಗಿ ಮತ್ತು ಸ್ಥಳವನ್ನು ಸುಟ್ಟು ಹಾಕುವುದಾಗಿ ಸಿಂಗ್ ಬೆದರಿಕೆ ಹಾಕಿದ್ದರು. ಈ ಕಾರಣದಿಂದಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

 Telangana 14 ACMM Court orders to release suspended BJP MLA Raja Singh

ಶಾಸಕನ ವಿರುದ್ಧ ಪ್ರಕರಣ ದಾಖಲು:

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೊ ಸಂದೇಶದಲ್ಲಿ, ಬಿಜೆಪಿ ಶಾಸಕರು ಮಾತನಾಡಿ, ಕಾಮಿಡಿಯನ್ ಮುನಾವರ್, ಹಿಂದೂ ದೇವರುಗಳ ಮೇಲೆ ಹಾಸ್ಯ ಮಾಡಿದ್ದಾರೆ ಮತ್ತು ಹೈದರಾಬಾದ್‌ನಲ್ಲಿ ಪ್ರದರ್ಶನಕ್ಕೆ ಅನುಮತಿ ನೀಡಬಾರದು ಎಂದು ಕರೆ ನೀಡಿದ್ದರು.

ಜನವರಿ 9 ರಂದು ತೆಲಂಗಾಣ ರಾಜಧಾನಿಯಲ್ಲಿ ಪ್ರದರ್ಶನ ನೀಡಬೇಕಿತ್ತು. ಆದರೆ ದಕ್ಷಿಣ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಯಿತು. ಆಗಲೂ ತೆಲಂಗಾಣ ಬಿಜೆಪಿ ಫರೂಕಿ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿವಾದಾತ್ಮಕ ಹೇಳಿಕೆ, ಬಂಧನತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿವಾದಾತ್ಮಕ ಹೇಳಿಕೆ, ಬಂಧನ

"ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಲು ಅವರನ್ನು ಆಹ್ವಾನಿಸಿದರೆ ಏನಾಗುತ್ತದೆ ಎಂದು ಅವರು ನೋಡಲಿ. ಎಲ್ಲೇ ಕಾರ್ಯಕ್ರಮ ನಡೆದರೂ ಆತನನ್ನು ಥಳಿಸುತ್ತೇವೆ. ಯಾರೇ ಅವರಿಗೆ ಸ್ಥಳವನ್ನು ನೀಡಿದರೆ, ನಾವು ಅಲ್ಲಿ ಬೆಂಕಿ ಹಚ್ಚುತ್ತೇವೆ'' ಎಂದು ಸಿಂಗ್ ವಿಡಿಯೊದಲ್ಲಿ ಹೇಳಿದ್ದಾರೆ.

BJP MLA Raja Singh

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ ರಾಜಾ ಸಿಂಗ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಇತರರಲ್ಲಿ ಕ್ರಿಮಿನಲ್ ಬೆದರಿಕೆ ಹಾಕುವ ಉದ್ದೇಶಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಿಕೊಳ್ಳಲಾಗಿತ್ತು.

ತೆಲಂಗಾಣದ ಗೋಶಾಮಹಲ್‌ನ ಕ್ಷೇತ್ರದ ಬಿಜೆಪಿ ಶಾಸಕ ಟಿ ರಾಜಾಸಿಂಗ್, ಪ್ರವಾದಿ ಮೊಹಮ್ಮದ್ ವಿರುದ್ಧ ಧರ್ಮನಿಂದೆಯ ಹೇಳಿಕೆ ನೀಡಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 (ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಹಾಳುಗೆಡವುದು ಅಥವಾ ಅಪವಿತ್ರಗೊಳಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು. ಹೈದರಾಬಾದ್ ದಕ್ಷಿಣ ವಲಯ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಪಕ್ಷದಿಂದ ಅಮಾನತು: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ತನ್ನ ಪಕ್ಷದ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಅವರನ್ನು ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ ಶೋಕಾಸ್ ನೀಡಿದ್ದು, ಉತ್ತರ ನೀಡಲು ಪಕ್ಷವು 10 ದಿನಗಳ ಕಾಲಾವಕಾಶ ನೀಡಿದೆ.

English summary
Telangana 14 ACMM Court orders to release suspended BJP MLA Raja Singh. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X