ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ-ಆಂಧ್ರ ಅಂತಾರಾಜ್ಯ ಬಸ್ ಸಂಚಾರ ಪುನರಾರಂಭ

|
Google Oneindia Kannada News

ಹೈದರಾಬಾದ್,ನವೆಂಬರ್ 02: ಕೊರೊನಾ ಸೋಂಕಿನಿಂದಾಗಿ ಸ್ಥಗಿತಗೊಂಡಿದ್ದ ಆಂಧ್ರಪ್ರದೇಶ-ತೆಲಂಗಾಣ ಅಂತಾರಾಜ್ಯ ಬಸ್ ಸಂಚಾರ ಇಂದಿನಿಂದ ಪುನರಾರಂಭಗೊಳ್ಳಲಿದೆ.

ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವಿನ ಬಸ್ ಸಂಚಾರ ಏಳು ತಿಂಗಳ ನಂತರ ಸೋಮವಾರ ಪುನಾರಾರಂಭವಾಗಿದೆ.

ಭಾರತದಲ್ಲಿ ಒಂದೇ ದಿನ 45230 ಮಂದಿಗೆ ಕೊರೊನಾವೈರಸ್ ಸೋಂಕು ಭಾರತದಲ್ಲಿ ಒಂದೇ ದಿನ 45230 ಮಂದಿಗೆ ಕೊರೊನಾವೈರಸ್ ಸೋಂಕು

ದೇಶಾದ್ಯಂತ ಅನ್‌ಲಾಕ್‌ 1 ಜಾರಿಯಾದ ನಂತರ ಅಂತರರಾಜ್ಯ ಸಂಚಾರಕ್ಕೆ ಕೇಂದ್ರ ಸರ್ಕಾರ ಮುಕ್ತ ಅವಕಾಶ ಕಲ್ಪಿಸಿತ್ತು. ಅದರಂತೆ ಸೆಪ್ಟೆಂಬರ್‌ನಲ್ಲಿ ಟಿಎಸ್‌ಆರ್‌ಟಿಸಿ ಇತರ ರಾಜ್ಯಗಳಿಗೆ ಪ್ರಯಾಣಿಕರ ಸಾಗಣೆ ಪ್ರಾರಂಭ ಮಾಡಿತು. ಆದರೆ ಆಂಧ್ರ ಪ್ರದೇಶ ಸರ್ಕಾರ ಅಂತರರಾಜ್ಯ ಬಸ್ ಸಂಚಾರಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಇದುವರೆಗೂ ಸಂಚಾರ ಆರಂಭವಾಗಿರಲಿಲ್ಲ.

Telangana-Andhra Pradesh Inter State Bus Services Resume

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಉಭಯ ರಾಜ್ಯಗಳ ನಡುವೆ ಮತ್ತೆ ಬಸ್ ಸಂಚಾರ ಆರಂಭಿಸುವ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಟಿಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದಂತೆ ತೋರುತ್ತಿದೆ. ಕಳೆದ 24 ಗಂಟೆಗಳಲ್ಲಿ 45230 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 53,285 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 496 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
Telangana-Andhra Pradesh Inter State Bus Services Resume From Today. India's COVID-19 caseload crossed the 82 lakh-mark, while the number of people who have recuperated from the disease surged to 75.44 lakh pushing the national recovery rate to 91.68 per cent, according to the Union Health Ministry data updated on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X