ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅಗ್ನಿಪರೀಕ್ಷೆ

|
Google Oneindia Kannada News

ಹೈದರಾಬಾದ್, ನವೆಂಬರ್ 06: ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಇನ್ನು 48 ಗಂಟೆಗಳ ಕಾಲ ಅಗ್ನಿ ಪರೀಕ್ಷೆ ಎದುರಿಸಲಿದ್ದಾರೆ.

ದೀಪಾವಳಿ ವಿಶೇಷ ಪುರವಣಿ

ನವೆಂಬರ್ 7 ರಂದು ದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ.

ವಿಧಾನಸಭೆ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆವಿಧಾನಸಭೆ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ತೆಲಂಗಾಣದಲ್ಲಿ ತೆಲುಗು ದೇಶಂ ಪಕ್ಷ(ಟಿಡಿಪಿ), ಸಿಪಿಐ ಮೈತ್ರಿ ಪಕ್ಷಗಳು ಟಿಕೆಟ್ ಗೆ ಬೇಡಿಕೆ ಇಟ್ಟಿದ್ದು, ಕೊನೆಯ ಕ್ಷಣದಲ್ಲಿ ಬಂಡಾಯ ಏಳಬಾರದು ಅಂದರೆ ಅವರಿಗೆ ಟಿಕೆಟ್ ನೀಡಲೇಬೇಕು ಎಂಬ ತೀರ್ಮಾನಕ್ಕೆ ಹೈಕಮಾಂಡ್ ಬಂದಿದೆ. ಇದರಿಂದ ಮೂಲ ಕಾಂಗ್ರೆಸ್ಸಿಗರಲ್ಲಿ ಅತೃಪ್ತಿ ಉಂಟಾಗಿದೆ.

ಎರಡು ದಿನಗಳಲ್ಲಿ ಬಂಡಾಯದ ಸಾಧ್ಯತೆ

ಎರಡು ದಿನಗಳಲ್ಲಿ ಬಂಡಾಯದ ಸಾಧ್ಯತೆ

ನ.07 ರಂದು ಸ್ಕ್ರೀನ್ ಕಮಿಟಿ ಸಭೆ ನಡೆಯಲಿದ್ದು, ಇದರಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧವಾಗಲಿದೆ. ಈ ಪಟ್ಟಿಯನ್ನು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಅಂತಿಗೊಳಿಸಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನೊಂದಿಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ಇತರ ಅಭ್ಯರ್ಥಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿರುವುದರಿಂದ ಪಕ್ಷದಲ್ಲಿ ಬಂಡಾಯ ಏಳುವ ಸಾಧ್ಯತೆಗಳು ಹೆಚ್ಚಾಗಿವೆ.

ವೋಟಿಗಾಗಿ ಬಹುಕೃತ ವೇಷ, ತೆಲಂಗಾಣದಲ್ಲಿ ಇದು ಮಾಮೂಲು ವೋಟಿಗಾಗಿ ಬಹುಕೃತ ವೇಷ, ತೆಲಂಗಾಣದಲ್ಲಿ ಇದು ಮಾಮೂಲು

ನವೆಂಬರ್ 9 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವೆಂಬರ್ 9 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಾಂಗ್ರೆಸ್ ಪಕ್ಷವು ನ.9 ರಂದು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ. ತೆಲಂಗಾಣದ 119 ಕ್ಷೇತ್ರಗಳಲ್ಲಿ 96 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, 14 ಕ್ಷೇತ್ರಗಳಲ್ಲಿ ಇತರ ಮೈತ್ರಿ ಪಕ್ಷಗಳು ಸ್ಪರ್ಧಿಸಲಿವೆ.

ವೈಎಸ್ ಆರ್ ಕಾಂಗ್ರೆಸ್, ಜನ ಸೇನಾ ಪಾರ್ಟಿ ತೆಲಂಗಾಣ ಸ್ಪರ್ಧೆಯಿಲ್ಲ!ವೈಎಸ್ ಆರ್ ಕಾಂಗ್ರೆಸ್, ಜನ ಸೇನಾ ಪಾರ್ಟಿ ತೆಲಂಗಾಣ ಸ್ಪರ್ಧೆಯಿಲ್ಲ!

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, 119 ವಿಧಾನಸಭಾ ಕ್ಷೇತ್ರಗಳಲ್ಲಿ 38 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.

ತೆಲಂಗಾಣದಲ್ಲಿ ಚುನಾವಣೆ ಎಂದು?

ತೆಲಂಗಾಣದಲ್ಲಿ ಚುನಾವಣೆ ಎಂದು?

119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.

English summary
Telangana assembly elections 2018: The fate of aspirants for Congress tickets will be decided in the next 48 hours, with the party’s central screening committee chaired by UPA chairperson Sonia Gandhi set to meet on November 7 in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X