ತೆಲಂಗಾಣ: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ
ಹೈದರಾಬಾದ್, ನವೆಂಬರ್ 17: ಡಿಸೆಂಬರ್ ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ.
13 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನ.14 ರಂದು 10 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.
ಅದಕ್ಕೂ ಮುನ್ನ 65 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನ.11 ರಂದು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.

ಒಟ್ಟು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಸುಮಾರು 90 ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಲಿದ್ದು, ಇನ್ನುಳಿದ ಸ್ಥಾನಗಳಿಗೆ ಮಿತ್ರಪಕ್ಷಗಳಾದ ಟಿಡಿಪಿ, ಮತ್ತು ಎಡಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಿವೆ.
119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.












Click it and Unblock the Notifications