• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅರ್ಧಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳನ್ನು ಮುಚ್ಚಿಟ್ಟ ತೆಲಂಗಾಣ ಸರ್ಕಾರ

|
Google Oneindia Kannada News

ಹೈದರಾಬಾದ್, ಏಪ್ರಿಲ್ 19: ತೆಲಂಗಾಣದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸರ್ಕಾರ ಮಾಧ್ಯಮಕ್ಕೆ ನೀಡುತ್ತಿರುವ ಸಂಖ್ಯೆಯಲ್ಲೂ ತುಂಬಾ ವ್ಯತ್ಯಾಸಗಳಿವೆ ಎಂದು ಆರೋಪಿಸಲಾಗುತ್ತಿದೆ.

ಮಾಧ್ಯಮಕ್ಕೆ ನೀಡಿರುವ ಸಂಖ್ಯೆಗಿಂತ ಎರಡು ಪ್ರಕರಣಗಳು ಹೆಚ್ಚಿವೆ, ಜಿಲ್ಲಾ ಆರೋಗ್ಯಾಧಿಕಾರಿಗಳು ನೀಡಿರುವ ವರದಿ ಸಂಖ್ಯೆಯನ್ನು ಸರ್ಕಾರವು ಮಾಧ್ಯಮಗಳಿಗೆ ನೀಡುವ ಮುನ್ನ ಕಡಿತಗೊಳಿಸುತ್ತಿದೆ ಎಂಬುದು ತಿಳಿದುಬಂದಿದೆ.

ಕೊರೊನಾ ಆಘಾತ: ಭಾರತದಲ್ಲಿ ಒಂದೇ ದಿನ 2.73 ಲಕ್ಷ ಜನರಿಗೆ ಸೋಂಕು!ಕೊರೊನಾ ಆಘಾತ: ಭಾರತದಲ್ಲಿ ಒಂದೇ ದಿನ 2.73 ಲಕ್ಷ ಜನರಿಗೆ ಸೋಂಕು!

ಈ ಕುರಿತು 'ಇಂಡಿಯನ್ ಎಕ್ಸ್‌ಪ್ರೆಸ್' ನಡೆಸಿರುವ ರಿಯಾಲಿಟಿ ಚೆಕ್‌ನಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ. ಏಪ್ರಿಲ್ 17 ರಂದು 13 ಜಿಲ್ಲೆಗಳಲ್ಲಿ ವರದಿಯಾಗಿರುವ ಕೋವಿಡ್ 19 ಪ್ರಕರಣಗಳಿಗೆ ಹೋಲಿಸಿದರೆ, ಅದೇ ಜಿಲ್ಲೆಗಳಲ್ಲಿ ನೀಡಿರುವ ಜಿಲ್ಲಾಧಿಕಾರಿಗಳು ಹೇಳಿರುವ ಮಾಹಿತಿಗಿಂತ ಶೇ.66ರಷ್ಟು ಪ್ರಕರಣಗಳನ್ನು ಕಡಿಮೆ ಮಾಡಿರುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ.

13 ಜಿಲ್ಲೆಗಳಲ್ಲಿ ಏಪ್ರಿಲ್ 17ರಂದು ವರದಿಯಾದ ಪ್ರಕರಣಗಳು ಒಟ್ಟು 4,868ರಷ್ಟಿದೆ. ಆದರೆ ಸರ್ಕಾರ ನೀಡಿರುವ ಮಾಹಿತಿ ಕೇವಲ 1,627ರಷ್ಟಾಗಿತ್ತು.ಹಾಗೆಯೇ ಪ್ರತಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿ ಜಿಲ್ಲೆಗಳ ಕೊರೊನಾ ಸೋಂಕಿತರ ಮಾಹಿತಿಯನ್ನು ಪ್ರತ್ಯೇಕವಾಗಿ ನೀಡದಿರಲು ಹೇಳಿದೆ.

ಸ್ವಲ್ಪ ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಪ್ರತಿ ಜಿಲ್ಲೆಗಳ ಕೊರೊನಾ ಸೋಂಕಿತರ ಮಾಹಿತಿಯನ್ನು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಹಂಚಿಕೊಳ್ಳುತ್ತಿದ್ದರು. ಅದನ್ನು ತಡೆಹಿಡಿಯಲಾಗಿದೆ.

ತೆಲಂಗಾಣದಲ್ಲಿ ಕಳೆದ 24 ಗಂಟೆಗಳಲ್ಲಿ 5093 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ದೇಶದಲ್ಲಿ ಒಂದೇ ದಿನ 273810 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 1,619 ಮಂದಿ ಪ್ರಾಣ ಬಿಟ್ಟಿದ್ದು, 1,44,178 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,50,61,919 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,29,53,821 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,78,769 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 19,29,329 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
The actual number of Covid-19 cases in Telangana could be twice that of the numbers dished out by the State government in its daily media bulletin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X