ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ ಉಪ ಚುನಾವಣೆ: ಬಿಜೆಪಿಗೆ ಅಚ್ಚರಿಯ ಮುನ್ನಡೆ

|
Google Oneindia Kannada News

ಹೈದರಾಬಾದ್, ನವೆಂಬರ್ 10: ತೆಲಂಗಾಣ ವಿಧಾನಸಭೆಯ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಸಾಧನೆ ತೋರಿಸಿದೆ. ಸ್ಥಳೀಯ ಪಕ್ಷಗಳ ಪ್ರಾಬಲ್ಯವಿರುವ ತೆಲಂಗಾಣದ ಒಂದು ಕ್ಷೇತ್ರದಲ್ಲಿನ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶ

ತೆಲಂಗಾಣದ ದುಬ್ಬಕಾ ಉಪ ಚುನಾವಣೆಯ ಕದನದಲ್ಲಿ ನಾಲ್ಕು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಂ ರಘುನಂದನ್ ರಾವ್ ಅವರು 13055 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಿಂದಲೇ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ನಾಲ್ಕನೇ ಸುತ್ತಿನಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಪಕ್ಷದ ಸೊಲಿಪೆಟಾ ಸುಜಾತಾ ಅವರು 10375 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಚೆರುಕು ಶ್ರೀನಿವಾಸ ರೆಡ್ಡಿ ಕೇವಲ 2158 ಮತಗಳೊಂದಿಗೆ ಹಿನ್ನಡೆ ಅನುಭವಿಸಿದ್ದರು.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿ

ಆಡಳಿತಾರೂಢ ಟಿಆರ್ಎಸ್ ಪಕ್ಷದ ಶಾಸಕರಾಗಿದ್ದ ಸೊಲಿಪೆಟಾ ರಾಮಲಿಂಗಾ ರೆಡ್ಡಿ ಅವರ ಅಕಾಲಿಕ ನಿಧನದಿಂದ ತೆರವಾದ ದುಬ್ಬಕಾ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಾಮಲಿಂಗಾ ರೆಡ್ಡಿ ಅವರ ಪತ್ನಿ ಸುಜಾತಾ ಅವರನ್ನೇ ಟಿಆರ್ಎಸ್ ಕಣಕ್ಕಿಳಿಸಿದೆ.

 Telangana Dubbaka Bypoll Result 2020: BJP Leads Over TRS

ಐದನೇ ಸುತ್ತಿನ ಎಣಿಕೆ ಮುಕ್ತಾಯದ ವೇಳೆಗೆ ಬಿಜೆಪಿ 16,517 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದರೆ, ಟಿಆರ್ಎಸ್ ಅಭ್ಯರ್ಥಿ 13,487 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ 2,724 ಮತಗಳನ್ನು ಪಡೆದಿದೆ.

English summary
Telangana Dubbaka Bypoll Result 2020: BJP candidate M Raghunandan Rao leading over TRS candidate Solipeta Sujatha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X