ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ ಚುನಾವಣೆ : ಒಂದೇ ವೇದಿಕೆಯಲ್ಲಿ ರಾಹುಲ್, ಸೋನಿಯಾ ಮತಬೇಟೆ

By ವಿಕಾಸ್ ನಂಜಪ್ಪ
|
Google Oneindia Kannada News

ಹೈದರಾಬಾದ್, ನವೆಂಬರ್ 21 : ವಿಧಾನಸಭೆ ಚುನಾವಣೆ ನಡೆಯುತ್ತಿರುವ ತೆಲಂಗಾಣಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಗಮಿಸಲಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚುತ್ತಿದೆ.

ನವೆಂಬರ್ 23ರಂದು ಸೋನಿಯಾ ಮತ್ತು ರಾಹುಲ್ ಗಾಂಧಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಡಿಸೆಂಬರ್ 7ರಂದು ರಾಜ್ಯದ 119 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.

ತೆಲಂಗಾಣದಲ್ಲಿ ಸೋನಿಯಾ ಮ್ಯಾಜಿಕ್, ಕಾಂಗ್ರೆಸ್ ಪುಟಿದೇಳೋಕೆ ಅದೊಂದೇ ಟಾನಿಕ್!ತೆಲಂಗಾಣದಲ್ಲಿ ಸೋನಿಯಾ ಮ್ಯಾಜಿಕ್, ಕಾಂಗ್ರೆಸ್ ಪುಟಿದೇಳೋಕೆ ಅದೊಂದೇ ಟಾನಿಕ್!

ಮೇದಾಚಲದಲ್ಲಿ ನವೆಂಬರ್ 23ರಂದು ಸಮಾವೇಶ ಉದ್ದೇಶಿಸಿ ರಾಹುಲ್ ಮತ್ತು ಸೋನಿಯಾ ಗಾಂಧಿ ಮಾತನಾಡಲಿದ್ದಾರೆ. ತೆಲಂಗಾಣ ರಾಜ್ಯ ರಚನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!

Telangana election : For the first time Rahul-Sonia to share stage

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಉತ್ತಮ ಕುಮಾರ್ ಅವರು ಸಮಾವೇಶದ ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದಾರೆ. ಸಾವಿರಾರು ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ.

ಸಮಾವೇಶ ರದ್ದುಗೊಳಿಸಲು 25 ಲಕ್ಷ ಆಫರ್: ಕಾಂಗ್ರೆಸ್ ವಿರುದ್ಧ ಓವೈಸಿ ಆರೋಪಸಮಾವೇಶ ರದ್ದುಗೊಳಿಸಲು 25 ಲಕ್ಷ ಆಫರ್: ಕಾಂಗ್ರೆಸ್ ವಿರುದ್ಧ ಓವೈಸಿ ಆರೋಪ

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ನವೆಂಬರ್ 23ರ ಸಂಜೆ 4 ಗಂಟೆಗೆ ಬೇಗಂಪೇಟ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5ಗಂಟೆಯಿಂದ 6.30ರ ತನಕ ಮೇದಾಚಲದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ತೆಲಂಗಾಣ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಕಾಂಗ್ರೆಸ್-ಟಿಡಿಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಟಿಆರ್‌ಎಸ್ ಕಾಂಗ್ರೆಸ್ ಪಕ್ಷಕ್ಕೆ ಎದುರಾಳಿಯಾಗಿದೆ.

English summary
For the first time the mother son duo of Sonia and Rahul Gandhi would share the stage at an election rally in Telangana. Rahul and Sonia will be on the stage at a public meeting at Medchal constituency on November 23. Assembly election will be held on December 7 for 119 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X