ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ; ರಾಜ್ಯದಲ್ಲಿ 10 ದಿನದ ಸಂಪೂರ್ಣ ಲಾಕ್‌ಡೌನ್ ಘೋಷಣೆ

|
Google Oneindia Kannada News

ಹೈದರಾಬಾದ್, ಮೇ 11; ಕೋವಿಡ್ ಸೋಂಕಿನ ಹರಡುವಿಕೆ ತಡೆಯಲು ತೆಲಂಗಾಣ ಸರ್ಕಾರ 10 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದೆ. ಅಗತ್ಯ ವಸ್ತುಗಳ ಖರೀದಿಗೆ 4 ಗಂಟೆಗಳ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಪೂರ್ರಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಬುಧವಾರ ಬೆಳಗ್ಗೆಯಿಂದ 10 ದಿನಗಳ ಸಂಪೂರ್ಣ ಲಾಕ್‌ಡೌನ್ ಜಾರಿಗೆ ಬರಲಿದೆ ಎಂದು ತೆಲಂಗಾಣ ಸರ್ಕಾರ ಹೇಳಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಶಿವಮೊಗ್ಗ ನಗರದಲ್ಲಿ ವಾರದ 4 ದಿನ ಸಂಪೂರ್ಣ ಲಾಕ್ ಡೌನ್ ಶಿವಮೊಗ್ಗ ನಗರದಲ್ಲಿ ವಾರದ 4 ದಿನ ಸಂಪೂರ್ಣ ಲಾಕ್ ಡೌನ್

ಪ್ರತಿ ದಿನ ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 6 ಗಂಟೆಯ ತನಕ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ. ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯ ತನಕ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶವನ್ನು ನೀಡಲಾಗಿದೆ.

ಮೀನುಗಾರಿಕೆಗೆ 'ಲಾಕ್': ಕಾರ್ಮಿಕರಿಲ್ಲದೆ ಬಂದರುಗಳಲ್ಲಿ ನಿಂತಲ್ಲೇ ನಿಂತ ದೋಣಿಗಳುಮೀನುಗಾರಿಕೆಗೆ 'ಲಾಕ್': ಕಾರ್ಮಿಕರಿಲ್ಲದೆ ಬಂದರುಗಳಲ್ಲಿ ನಿಂತಲ್ಲೇ ನಿಂತ ದೋಣಿಗಳು

 Telangana Government Announced 10 Days Of Complete Lockdown

ಲಾಕ್‌ಡೌನ್ ಕುರಿತು ಮಾರ್ಗಸೂಚಿಯನ್ನು ಸರ್ಕಾರ ಇಂದು ಸಂಜೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಕೋವಿಡ್ ಹರಡುವಿಕೆ ತಡೆಯಲು ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳು ಲಾಕ್‌ಡೌನ್ ಜಾರಿಗೊಳಿಸಿವೆ.

ಲಾಕ್ ಡೌನ್; ಕಾರ್ಮಿಕರಿಗೆ ಮನೆಯಲ್ಲಿ ಆಶ್ರಯ ಕೊಟ್ಟ ಬೆಳ್ತಂಗಡಿ ಕೃಷಿಕ! ಲಾಕ್ ಡೌನ್; ಕಾರ್ಮಿಕರಿಗೆ ಮನೆಯಲ್ಲಿ ಆಶ್ರಯ ಕೊಟ್ಟ ಬೆಳ್ತಂಗಡಿ ಕೃಷಿಕ!

ಸಚಿವ ಸಂಪುಟ ಸಭೆಯಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ವಿವರವಾದ ಚರ್ಚೆ ನಡೆಯಿತು. ಲಾಕ್‌ಡೌನ್ ಜಾರಿ ನಂತರ ಹಲವು ರಾಜ್ಯಗಳಲ್ಲಿ ಕೋವಿಡ್ ಹೊಸಪ್ರಕರಣಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ ಲಾಕ್‌ಡೌನ್ ಜಾರಿಗೆ ತೀರ್ಮಾನ ಕೈಗೊಳ್ಳಲಾಯಿತು.

ತೆಲಂಗಾಣ ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 5,02,187. ಸಕ್ರಿಯ ಪ್ರಕರಣಗಳ ಸಂಖ್ಯೆ 62,797. ಇದುವರೆಗೂ ರಾಜ್ಯದಲ್ಲಿ 2,771 ಜನರು ಮೃತಪಟ್ಟಿದ್ದಾರೆ.

English summary
Telangana government announced 10 days of complete lockdown across the state starting from May 12th Wednesday morning. Daily relaxations are allowed form morning 6 to 10 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X