ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ತೆಲಂಗಾಣ ಹೆಡ್ ಮಾಸ್ಟರ್ ಬಂಧನ
ಹೈದರಾಬಾದ್, ಡಿಸೆಂಬರ್ 17: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತೆಲಂಗಾಣದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣದ ಭದ್ರಾದಿ ಕೋತಗುಡೆಂ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. 40 ವರ್ಷದ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದಾಗಿ ಶಾಲೆಯಲ್ಲಿ ಶಿಕ್ಷಕರಿಗೆ ಶೇ.50ರಷ್ಟು ಹಾಜರಾತಿಗೆ ಸರ್ಕಾರ ಆದೇಶಿಸಿತ್ತು. ಹೀಗಾಗಿ ಆಗಸ್ಟ್ ನಿಂದ ಮುಖ್ಯೋಪಾಧ್ಯಾಯ ಹಾಗೂ ಮತ್ತೊಬ್ಬ ಶಿಕ್ಷಕರು ಪರ್ಯಾಯ ದಿನಗಳಂತೆ ಶಾಲೆಗೆ ಹೋಗುತ್ತಿದ್ದರು.
ಈಚೆಗೆ ವಿದ್ಯಾರ್ಥಿನಿಯರಿಬ್ಬರು ಅಸ್ವಸ್ಥಗೊಂಡಿದ್ದು, ಅದರಲ್ಲಿ ಒಬ್ಬ ವಿದ್ಯಾರ್ಥಿನಿಯು ತನ್ನ ತಾಯಿ ಮುಖ್ಯೋಪಾಧ್ಯಾಯನ ಕೃತ್ಯದ ಕುರಿತು ಹೇಳಿಕೊಂಡಿದ್ದಾಳೆ. ಪದೇ ಪದೇ ಲೈಂಗಿಕ ಶೋಷಣೆ ನೀಡುತ್ತಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ಪೋಷಕರು ದೂರು ನೀಡಿದ್ದು, ಇನ್ನಿತರ ವಿದ್ಯಾರ್ಥಿನಿಯರನ್ನೂ ವಿಚಾರಣೆ ಮಾಡಲಾಗಿತ್ತು.

ಏಳರಿಂದ ಹನ್ನೊಂದು ವರ್ಷದ ಸುಮಾರು ಐವರು ವಿದ್ಯಾರ್ಥಿನಿಯರ ಮೇಲೆ ಮುಖ್ಯೋಪಾಧ್ಯಾಯ ಲೈಂಗಿಕ ಶೋಷಣೆ ಮಾಡಿದ್ದಾನೆ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ವಿದ್ಯಾರ್ಥಿನಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಪೋರ್ನ್ ವಿಡಿಯೋಗಳನ್ನು ತೋರಿಸಿ, ಅದೇ ರೀತಿ ತನ್ನೊಂದಿಗೆ ನಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ ಮಾಡುತ್ತಿದ್ದು, ಈ ವಿಷಯ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಮುಖ್ಯೋಪಾಧ್ಯಾಯನ ವಿರುದ್ಧ ಅತ್ಯಾಚಾರ ಹಾಗೂ ಪೋಕ್ಸೊ ಪ್ರಕರಣವನ್ನು ದಾಖಲಿಸಲಾಗಿದೆ. "ವಿದ್ಯಾರ್ಥಿನಿಯರು ಇನ್ನೂ ಚಿಕ್ಕ ವಯಸ್ಸಿನವರಾಗಿರುವುದರಿಂದ ಅವರಿಗೆ ಕೌನ್ಸಿಲಿಂಗ್ ನೀಡಲಾಗುತ್ತಿದೆ" ಎಂದು ಭದ್ರಾದಿ ಕೋತಗುಡೆಂ ಜಿಲ್ಲೆಯ ಪೊಲೀಸ್ ಸುನೀಲ್ ದತ್ ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications