ಹಿರಿಯ ಅಧಿಕಾರಿಗಳ ಕಿರುಕುಳ, ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ

Posted By:
Subscribe to Oneindia Kannada

ಮೇದಕ್(ತೆಲಂಗಾಣ), ಆಗಸ್ಟ್ 17: ಹಿರಿಯ ಅಧಿಕಾರಿಗಳ ಕಿರುಕುಳ ಆರೋಪಿಸಿ ಪೊಲೀಸ್ ಸಬ್ ಇನ್ಸ್​ಪೆಕ್ಟರೊಬ್ಬರು ತಮ್ಮ ಬಳಿ ಇರುವ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಬೆಳಗ್ಗೆ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ತೆಲಂಗಾಣದ ಮೇದಕ್ ಜಿಲ್ಲೆಯ ಕುಕನೂರ್ ಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಕ್ವಾರ್ಟರ್ಸ್ ನಲ್ಲಿ ತಮ್ಮ ಮನೆಯಲ್ಲಿದ್ದ ಇತರೆ ಸದಸ್ಯರನ್ನು ಹೊರಕ್ಕೆ ಕಳಿಸಿದ ನಂತರ ಪೊಲೀಸ್ ಇನ್ಸ್ ಪೆಕ್ಟರ್ 38 ವರ್ಷ ವಯಸ್ಸಿನ ರಾಮಕೃಷ್ಣರೆಡ್ಡಿ ಅವರು ಆತ್ಮಹತ್ಯೆಗೆ ಶರಣಾಗಿದಾರೆ.[ಶೆಣೈ ಆರೋಪದಲ್ಲಿ ಹುರುಳಿಲ್ಲ, ತನಿಖೆಗೆ ಸಿದ್ಧ : ಬಳ್ಳಾರಿ ಎಸ್ಪಿ]

ಮನೆಯಲ್ಲಿ ಸೂಸೈಡ್ ನೋಟ್ ಸಿಕ್ಕಿದ್ದು, ಸಾವಿಗೆ ಕಾರಣ ಹಿರಿಯ ಅಧಿಕಾರಿಗಳ ಕಿರುಕುಳ ಎಂದು ಹೇಳಲಾಗಿದೆ. ಡಿಎಸ್ ಪಿ ಶ್ರೀಧರ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ವೆಂಕಟಯ್ಯ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.[ಗಣಪತಿ ಆತ್ಮಹತ್ಯೆ : ಕೆಜೆ ಜಾರ್ಜ್ ವಿರುದ್ಧ ಎಫ್ ಐಆರ್]

Telangana’s Medak Sub-Inspector commits suicide in alleges harassment by seniors

ಕೊಂಡಪಾಕ ಮಂಡಲ್​ನ ಕುಕುನುರ್ಪಳ್ಳಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಮಕೃಷ್ಣ ರೆಡ್ಡಿ ಅವರು ತಾವು ಆತ್ಮಹತ್ಮೆ ಮಾಡಿಕೊಳ್ಳುವುದಕ್ಕೂ ಮುನ್ನ ಮತ್ತೊಬ್ಬ ಸಬ್ ಇನ್ಸ್ ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳಿಗೆ ಕರೆ ಮಾಡಿ ಹೇಳಿದ್ದಾರೆ. ಅವರೆಲ್ಲರೂ ಮನೆಗೆ ತಲುಪುವಷ್ಟರಲ್ಲಿ ಗುಂಡು ಹಾರಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಹೈದರಾಬಾದ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ರಾಮಕೃಷ್ಣ ರೆಡ್ಡಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೂ ಮುನ್ನ ಪತ್ನಿಗೆ ದೂರವಾಣಿ ಕರೆ ಮಾಡಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ.[ಪೊಲೀಸರ ಆತ್ಮಹತ್ಯೆಗೆ ಏನು ಕಾರಣ]

ವೃತ್ತಿಯಲ್ಲಿ ಕಿರುಕುಳ ಪ್ರಕರಣ ದಾಖಲಿಸಿಕೊಂಡಿರುವ ಕೂಕನ್ ಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರುಕುಳ ಅನುಭವಿಸಿ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆಗೆ ಶರಣಾಗಿದ್ದರೆ, ಎಸ್ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದರೆ, ವಿಜಯನಗರ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಡ್ಯದಲ್ಲಿ ಮೀಸಲು ಪಡೆ ಪೇದೆ ಅಮಾನತುಗೊಂಡ ಘಟನೆಗಳನ್ನು ಇಲ್ಲಿ ಸ್ಮರಿಸಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A Sub-Inspector of Police in Telangana’s Medak district committed suicide in his residence in the wee hours of Wednesday(Aug 17). In a suicide note found by his bed, he has blamed his superior officers for his death, including DSP Sreedhar and Circle Inspector Venkatiah.
Please Wait while comments are loading...