ತೆಲಂಗಾಣದಲ್ಲಿ ಪೊಲೀಸ್ ಅಧಿಕಾರಿಯ ಮಗ ನಿಗೂಢ ಸಾವು
ಹೈದರಾಬಾದ್, ಸೆಪ್ಟೆಂಬರ್ 26: ತೆಲಂಗಾಣ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕಿ ಎಸ್ ಪಿ ರತ್ನಾ ಕುಮಾರಿ ಅವರ ಪುತ್ರ ತಮ್ಮ ಮನೆಯಲ್ಲೇ ಮೃತನಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಇದು ಕೊಲೆಯೋ, ಆಕಸ್ಮಿಕ ಸಾವೋ, ಆತ್ಮಹತ್ಯೆಯೋ ಎಂಬ ಕುರಿತು ಯಾವುಸೇ ಮಾಹಿತಿ ಲಭ್ಯವಾಗಿಲ್ಲ. ಪೊಲೀಸ್ ಅಕಾಡೆಮಿಯ ಉಪನಿರ್ದೇಶಕಿಯ ಮಗನಾಗಿರುವುದರಿಂದ ಖುದ್ದು, ಉನ್ನತ ಪೊಲೀಸ್ ಅಧಿಕಾರಿಗಳೇ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications