ತೆಲಂಗಾಣ; ಟ್ರಕ್‌ಗೆ ಟಾಟಾ ಏಸ್ ಡಿಕ್ಕಿ, 8 ಸಾವು, 20 ಜನರಿಗೆ ಗಾಯ

ಹೈದರಾಬಾದ್, ಮೇ 9: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಇನ್ನು ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 6 ಮಹಿಳೆಯರು ಸೇರಿದ್ದಾರೆ. ಮಿನಿವ್ಯಾನ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಯಲ್ಲರೆಡ್ಡಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಗಾಯಗೊಂಡ ಇಬ್ಬರು ಬಾನ್ಸವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಿಥಿ ಕಾರ್ಯಕ್ಕೆ ಹೋಗಿದ್ದರು; ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡ ಪ್ರಯಾಣಿಕರು ಪಿಟ್ಲಂ ಮಂಡಲದ ಚಿಲ್ಲರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಪಕ್ಕದ ಹಳ್ಳಿಯಲ್ಲಿ ನಡೆದ 10ನೇ ದಿನದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

Telangana Road Accident 8 Dead 20 Injured Ar Kamareddy

ತೆಲಂಗಾಣದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದರ ಜೊತೆಗೆ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+