ತೆಲಂಗಾಣ: ಮಾಟ, ಮಂತ್ರದ ಶಂಕೆ, ಬೆಂಕಿ ಹಚ್ಚಿ ಟೆಕ್ಕಿಯ ಹತ್ಯೆ
ಹೈದರಾಬಾದ್, ನವೆಂಬರ್ 24: ಟೆಕ್ಕಿ ಮಾಟ ಮಂತ್ರ ಮಾಡಿದ್ದಾರೆ ಎಂಬ ಸಂಶಯದಲ್ಲಿ ಅವರ ಸಂಬಂಧಿಯೇ ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಜಗ್ತಿಯಲ್ ಜಿಲ್ಲೆಯಲ್ಲಿ 38 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು ಮಾಟ ಮಂತ್ರ ಮಾಡಿದ್ದಾನೆ ಎಂಬ ಅನುಮಾನದ ಮೇಲೆ ಅವರ ಸಂಬಂಧಿಯೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮಹಿಳೆಯನ್ನು ಕೊಲೆಗೈದು ಕೆರೆಗೆ ಎಸೆದಿದ್ದ ಆರೋಪಿಗಳ ಬಂಧನ
ಟೆಕ್ಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.ಟೆಕ್ಕಿ ಸೋಮವಾರ ಸಂಜೆ ಮಲಯಾಳ ಮಂಡಲದಲ್ಲಿರುವ ತಮ್ಮ ಸಂಬಂಧಿಯನ್ನು ಭೇಟಿ ಮಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಆದರೆ, ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.