ತೆಲಂಗಾಣ ಚುನಾವಣೆ : ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್
ಸಿದ್ದಿಪೇಟ್(ತೆಲಂಗಾಣ), ನವೆಂಬರ್ 14: ತೆಲಂಗಾಣ ಮುಖ್ಯಮಂತ್ರಿ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ (ಟಿಎಸ್ ಆರ್) ಮುಖ್ಯ ಕೆ ಚಂದ್ರಶೇಖರ್ ರಾವ್ ಅವರು ಬುಧವಾರ(ನವೆಂಬರ್ 14)ದಂದು ಗಜ್ವೇಲ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ದಿಪೇಟ್ ಜಿಲ್ಲೆಯ ಕೊನಯಿಪಲ್ಲಿ ವೆಂಕಣ್ಣ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗಜ್ವೇಲ್ ವಿಧಾನಸಭಾ ಕ್ಷೇತ್ರದಿಂದ ಕೆಸಿಆರ್ ಅವರು ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.2014ರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯ ಅಭ್ಯರ್ಥಿ ವಾಂಟೆರು ಪ್ರತಾಪ್ ರೆಡ್ಡಿ ಅವರನ್ನು 19,391 ಮತಗಳ ಅಂತರದಿಂದ ಸೋಲಿಸಿದ್ದರು.

ಈಗ ಕಾಂಗ್ರೆಸ್ ಪಕ್ಷ ಸೇರಿರುವ ರೆಡ್ಡಿ ಅವರು ಮತ್ತೊಮ್ಮೆ ಕೆಸಿಆರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 07ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 11ರಂದು ಮತ ಎಣಿಕೆ ನಡೆದು, ಫಲಿತಾಂಶ ಹೊರಬರಲಿದೆ. ಸೆಪ್ಟೆಂಬರ್ 06ರಂದು ವಿಧಾನಸಭೆಯನ್ನು ವಿಸರ್ಜನೆ ಮಾಡಿದ್ದರಿಂದ ಅವಧಿಗೂ ಮುನ್ನ ಚುನಾವಣೆ ಎದುರಾಗಿದೆ.












Click it and Unblock the Notifications