ಪೇಪರ್ ಬಾಕ್ಸ್ನಲ್ಲಿ ಇನ್ನು ತಿರುಪತಿ ಲಡ್ಡು ವಿತರಣೆ ?
Recommended Video

ತಿರುಪತಿ, ಡಿಸೆಂಬರ್ 1: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವವರಿಗೆ ಇನ್ನುಮುಂದೆ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ಪೇಪರ್ ಬಾಕ್ಸ್ಗಳಲ್ಲಿ ನೀಡಲು ಚಿಂತನೆ ನಡೆದಿದೆ.
ಸದ್ಯಕ್ಕೆ ತಿರುಪತಿಯಲ್ಲಿ ಲಡ್ಡು ಪ್ರಸಾದ ಪಾಲಿಥಿನ್ ಪ್ಲಾಸ್ಟಿಕ್ ಬ್ಯಾಗ್ಗಳಲ್ಲಿ ನೀಡಲಾಗುತ್ತಿದ್ದು, ಇದರ ಬದಲಿಗೆ ಬಯೋ-ಡಿಗ್ರೇಡಬಲ್ ಪ್ಲಾಸ್ಟಿಕ್ ಕವರ್ಗಳು, ಬಟ್ಟೆ ಬ್ಯಾಗುಗಳನ್ನು ಉಪಯೋಗಿಸಲು ಟಿಟಿಡಿ ಆಲೋಚಿಸಿತ್ತಾದರೂ, ಫುಡ್ ಗ್ರೇಡ್ ಕಾಗದದ ಬಾಕ್ಸ್ಗಳೇ ಉತ್ತಮ ಎಂಬ ನಿರ್ಧಾರಕ್ಕೆ ಬರಲಾಗಿದೆ.

ಇದು ಒಂದೊಮ್ಮೆ ಜಾರಿಯಾದರೆ ಲಡ್ಡುಗಳ ಸಂಖ್ಯೆಗೆ ಅನುಗುಣವಾಗಿ ಮೂರು ಅಳತೆಯ ಬಾಕ್ಸ್ಗಳನ್ನು ತಯಾರಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವೆಂಕಟೇಶ್ವರ ಸನ್ನಿಧಾನದ ಕೌಂಟರ್ಗಳಲ್ಲಿ ವಿಶ್ವ ವಿಖ್ಯಾತ ಲಡ್ಡು ಪ್ರಸಾದವನ್ನು ಇನ್ನು ಕೆಲವೇ ದಿನಗಳಲ್ಲಿ ಫುಡ್ ಗ್ರೇಡ್ ಪೇಪರ್ಗಳಲ್ಲಿ ನೀಡಲಾಗುತ್ತದೆ.ಈ ಬಾಕ್ಸ್ಗಳು ಬೇಕರಿ, ಸಿಹಿ ತಿನಿಸುಗಳ ಅಂಗಡಿಗಳಲ್ಲಿ ನೀಡುವ ಪೇಪರ್ ಬಾಕ್ಸ್ಗಳಂತೆಯೇ ಇರಲಿದ್ದು, ಈಗಾಗಲೇ ಶ್ರೀಶೈಲ ದೇಗುಲದಲ್ಲಿ ಪ್ರಸಾದ ವಿನಿಯೋಗಕ್ಕೆ ಈ ಬಾಕ್ಸ್ಗಳನ್ನು ಬಳಸಲಾಗುತ್ತಿದೆ.
ದೇವಾಲಯವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ದೇವಾಲಯ ಆಡಳಿತ ಮಂಡಳಿ ನಿರ್ಧರಿಸಿದೆ, ದಿನನಿತ್ಯ ಲಕ್ಷಾಂತರ ಮಂದಿ ತಿಮ್ಮಪ್ಪನ ದರ್ಶನಕ್ಕೆಂದು ಬರುತ್ತಾರೆ, ಹಾಗೆಯೇ ಲಕ್ಷಗಟ್ಟಲೆ ಪ್ಲಾಸ್ಟಿಕ್ ಕವರ್ಗಳ ಬಳಕೆಯೂ ಆಗುತ್ತುದೆ.
ಇದನ್ನು ತಪ್ಪಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು ಪೇಪರ್ ಬಾಕ್ಸ್ಗಳಲ್ಲಿ ಲಡ್ಡುಗಳನ್ನು ವಿತರಿಸಲು ಚಿಂತನೆ ನಡೆಸಿದೆ. ಶೀಘ್ರವೇ ಇದನ್ನು ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications