ಕಾಚಿಗುಡದಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ
ಹೈದರಾಬಾದ್, ನವೆಂಬರ್ 11: ಕಾಚಿಗುಡದ ಬಳಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಇಂಟರ್‌ಸಿಟಿ ಹಾಗೂ ಎಎಂಟಿಎಸ್ ರೈಲು ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್ ಲೋಪದಿಂದ ಘಟನೆ ಸಂಭವಿಸಿದೆ ಎಂದು ತಿಳಿಸಲಾಗಿದೆ.

ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕಾಚಿಗುಡದ ನಿಂಬೋಳಿ ಅಡ್ಡದ ಬಳಿ ಎಂಎಂಟಿಎಸ್ ಹಾಗೂ ಕೊಂಗು ಎಕ್ಸ್‌ಪ್ರೆಸ್ ನಡುವೆ ಡಿಕ್ಕಿ ಸಂಭವಿಸಿದೆ.
ಕೊಂಗು ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ನಲ್ಲಿ ಇರುವಾಗ ಎಂಎಂಟಿಎಸ್ ರೈಲು ಬಂದು ಟಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿರುವ ಕಾರಣ ಸಾಕಷ್ಟು ರೈಲುಗಳ ಸಮಯವನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.












Click it and Unblock the Notifications