ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶುವೈದ್ಯೆ ಅತ್ಯಾಚಾರ, ಕೊಲೆ; ಆರೋಪಿಗಳು ಪೊಲೀಸ್ ಕಸ್ಟಡಿಗೆ

|
Google Oneindia Kannada News

ಹೈದರಾಬಾದ್, ಡಿಸೆಂಬರ್ 5 : ಹೈದರಾಬಾದ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸದ್ಯ, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ತೆಲಂಗಾಣದ ಶದ್‌ ನಗರ ನ್ಯಾಯಾಲಯ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. 10 ದಿನಗಳ ಕಾಲ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಚೆರ್ಲಪಲ್ಲಿ ಜೈಲಿನಲ್ಲಿರುವ ಆರೋಪಿಗಳನ್ನು ಪೊಲೀಸರು ಗುರುವಾರ ಬೆಳಗ್ಗೆ ವಶಕ್ಕೆ ಪಡೆಯಲಿದ್ದಾರೆ.

ಪಶುವೈದ್ಯೆ ಮೇಲೆ ಅತ್ಯಾಚಾರ; ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?ಪಶುವೈದ್ಯೆ ಮೇಲೆ ಅತ್ಯಾಚಾರ; ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

27 ವರ್ಷದ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳು ಪೆಟ್ರೋಲ್ ಸುರಿದು ಸುಡಲು ಯತ್ನಿಸಿದ್ದರು. ನವೆಂಬರ್ 27ರಂದು ಸಂತ್ರಸ್ತೆಯ ಶವ ಪತ್ತೆಯಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನವೆಂಬರ್ 28ರಂದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ತೆಲಂಗಾಣ ಅತ್ಯಾಚಾರ: ಆರೋಪಿಗಳಿಗೆ ಜೈಲಲ್ಲಿ ಮಟನ್ ಕರಿ ಭೋಜನತೆಲಂಗಾಣ ಅತ್ಯಾಚಾರ: ಆರೋಪಿಗಳಿಗೆ ಜೈಲಲ್ಲಿ ಮಟನ್ ಕರಿ ಭೋಜನ

ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಆದ್ದರಿಂದ, ಆರೋಪಿಗಳನ್ನು ತುರ್ತಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ವೈದ್ಯೆ ಅತ್ಯಾಚಾರ: ಆರೋಪಿಗಳ ಬಗ್ಗೆ ಇನ್ನಷ್ಟು ಆತಂಕಕಾರಿ ಮಾಹಿತಿ

ನ್ಯಾಯಾಧೀಶರು ರಜೆಯಲ್ಲಿ

ನ್ಯಾಯಾಧೀಶರು ರಜೆಯಲ್ಲಿ

ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ನವೆಂಬರ್ 29ರಂದು ನ್ಯಾಯಾಧೀಶರು ರಜೆಯಲ್ಲಿ ಇದ್ದ ಕಾರಣ ಆರೋಪಿಗಳನ್ನು ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗಿತ್ತು. ಅವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆರೋಪಿಗಳನ್ನು ಚೆರ್ಲಪಲ್ಲಿ ಜೈಲಿಗೆ ಕಳಿಸಲಾಗಿತ್ತು.

ವಶಕ್ಕೆ ನೀಡುವಂತೆ ಪೊಲೀಸರ ಅರ್ಜಿ

ವಶಕ್ಕೆ ನೀಡುವಂತೆ ಪೊಲೀಸರ ಅರ್ಜಿ

ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬಂಧಿಸಿದ ಬಳಿಕ ಪೊಲೀಸ್ ಠಾಣೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ, ಹೆಚ್ಚಿನ ವಿಚಾರಣೆ, ಸ್ಥಳದ ಮಹಜರು ನಡೆಸಲು ಸಾಧ್ಯವಾಗಿರಲಿಲ್ಲ. ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಹಾಕಿ ಆರೋಪಿಗಳನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯ 7 ದಿನಗಳ ಕಾಲ ವಶಕ್ಕೆ ನೀಡಿದೆ.

ಜೈಲಿನಲ್ಲಿ ಬಿಗಿಭದ್ರತೆಯಲ್ಲಿದ್ದಾರೆ

ಜೈಲಿನಲ್ಲಿ ಬಿಗಿಭದ್ರತೆಯಲ್ಲಿದ್ದಾರೆ

ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಚೆರ್ಲಪಲ್ಲಿ ಜೈಲಿನಲ್ಲಿ ಬಿಗಿ ಭದ್ರತೆಯಲ್ಲಿದ್ದಾರೆ. ನಿರ್ಭಯ ಮೇಲೆ ಅತ್ಯಾಚಾರ ನಡೆಸಿದ ಒಬ್ಬ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ, ಮತ್ತೊಬ್ಬ ಆರೋಪಿ ಮೇಲೆ ಕೈದಿಗಳು ಹಲ್ಲೆ ಮಾಡಿದ್ದರು. ಆದ್ದರಿಂದ, ಆರೋಪಿಗಳನ್ನು ಬಿಗಿ ಭದ್ರತೆ ಇರುವ ಬ್ಯಾರಕ್‌ನಲ್ಲಿ ಇರಿಸಲಾಗಿದೆ. ಗುರುವಾರ ಬೆಳಗ್ಗೆ ಶಂಶಾಬಾದ್ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ.

ಆರೋಪಿಗಳ ಪರವಾಗಿ ವಾದ ಇಲ್ಲ

ಆರೋಪಿಗಳ ಪರವಾಗಿ ವಾದ ಇಲ್ಲ

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಪರವಾಗಿ ವಾದ ಮಂಡನೆ ಮಾಡುವುದಿಲ್ಲ ಎಂದು ಶದ್‌ ನಗರ ಮತ್ತು ಮೊಹಬೂಬ್ ನಗರ ವಕೀಲರು ತೀರ್ಮಾನ ಕೈಗೊಂಡಿದ್ದಾರೆ. ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

English summary
Shadnagar Court of Telangana has granted the 7 days police custody for the four accused who raped and murdered veterinary doctor in Hyderabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X