ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎನ್ ಕೌಂಟರ್ ನಡೆದಿದ್ದು ಹೇಗೆ?
Recommended Video
ಹೈದರಾಬಾದ್, ಡಿಸೆಂಬರ್ 6: 27 ವರ್ಷದ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿಗಳು ಪೊಲೀಸ್ ಎನ್ ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು.
ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ನಡೆದ ಎನ್ ಕೌಂಟರ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗುರುವಾರ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದರು.
ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎನ್ ಕೌಂಟರ್‌ನಲ್ಲಿ ಮೃತಪಟ್ಟ ಆರೋಪಿಗಳು. ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದಾಗ ಎನ್ ಕೌಂಟರ್ ನಡೆದಿದೆ.
ನ್ಯಾಯಾಲಯ ಏಳು ದಿನಗಳ ಕಾಲ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿತ್ತು. ನ್ಯಾಯಾಂಗ ಬಂಧನಲ್ಲಿದ್ದ ಆರೋಪಿಗಳನ್ನು ಪೊಲೀಸರು ಗುರವಾರ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಸತತ ವಿಚಾರಣೆ ಬಳಿಕ ಸ್ಥಳ ಮಹಜರು ಮಾಡಲು ಆರೋಪಿಗಳನ್ನು ಕರೆದುಕೊಂಡು ಹೋಗಲಾಗಿತ್ತು.

ಹೈದರಾಬಾದ್‌ನಲ್ಲಿ ಎನ್ ಕೌಂಟರ್
ಶುಕ್ರವಾರ ಮುಂಜಾನೆ 3.30ರ ಸುಮಾರಿನಲ್ಲಿ ಹೈದರಾಬಾದ್ ಹೊರವಲಯದ ಚಟಾನ್‌ಪಲ್ಲಿ ಬ್ರಿಡ್ಜ್ ಬಳಿ ನಡೆದ ಎನ್ ಕೌಂಟರ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳು ಮೃತಪಟ್ಟಿದ್ದಾರೆ.

ಪೊಲೀಸರ ಮೇಲೆ ಕಲ್ಲು ತೂರಾಟ
ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶ್ವನಾಥ್ ಸಜ್ಜನರ್ ನೇತೃತ್ವದ ಅಧಿಕಾರಿಗಳ ತಂಡ ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲುವನ್ನು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗಿತ್ತು. ಆಗ ಪೊಲೀಸರ ಮೇಲೆ ಆರೋಪಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಪ್ರಯತ್ನ ನಡೆಸಿದ್ದರು.

ಗುಂಡು ಹಾರಿಸಿದ ಪೊಲೀಸರು
ಆರೋಪಿಗಳು ಪೊಲೀಸರು ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಆಗ ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ.

ಅತ್ಯಾಚಾರದ ಬಳಿಕ ಜೀವಂತವಾಗಿ ಸುಟ್ಟರು
ನವೆಂಬರ್ 27ರ ಬುಧವಾರ 9.15ರ ಸುಮಾರಿಗೆ 27 ವರ್ಷದ ಪಶುವೈದ್ಯೆಯನ್ನು ನಾಲ್ವರು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಆಕೆಗೆ ಮದ್ಯಕುಡಿಸಿ ಹಿಂಸೆ ನೀಡಿದ್ದರು. ಬಳಿಕ ಜೀವಂತವಿದ್ದಾಗಲೇ ಆಕೆಯನ್ನು ಪೆಟ್ರೋಲ್ ಸುರಿದು ಸುಟ್ಟಿದ್ದರು. ನವೆಂಬರ್ 28ರ ಗುರುವಾರ ಪಶುವೈದ್ಯೆಯ ಶವ ಪತ್ತೆಯಾಗಿತ್ತು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications