• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶುವೈದ್ಯೆ ಕೊಂದವರನ್ನು ಎನ್ ಕೌಂಟರ್ ಮಾಡಿದ್ದು ಕನ್ನಡಿಗ

|

ಹೈದರಾಬಾದ್, ಡಿಸೆಂಬರ್ 6 : ಹೈದರಾಬಾದ್‌ನಲ್ಲಿ ನಡೆದ ಎನ್‌ ಕೌಂಟರ್‌ನಲ್ಲಿ ಪಶು ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿಗಳು ಮೃತಪಟ್ಟಿದ್ದಾರೆ. ಪೊಲೀಸರು ನಡೆಸಿರುವ ಎನ್ ಕೌಂಟರ್ ಹಿಂದೆ ಇರುವುದು ಕನ್ನಡಿಗ.

ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಪೊಲೀಸರು ನಡೆಸಿದ ಎನ್ ಕೌಂಟರ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದ ಆರೋಪಿಗಳು ಮೃತಪಟ್ಟಿದ್ದಾರೆ. ಈ ಕಾರ್ಯಾಚರಣೆ ನಡೆಸಿರುವುದು ಕರ್ನಾಟಕ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್.

ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎಲ್ಲಾ ಆರೋಪಿಗಳ ಎನ್‌ ಕೌಂಟರ್ ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎಲ್ಲಾ ಆರೋಪಿಗಳ ಎನ್‌ ಕೌಂಟರ್

ವಿಶ್ವನಾಥ್ ಸಜ್ಜನರ್ ಸೈಬರಾಬಾದ್‌ನ ಪೊಲೀಸ್ ಆಯುಕ್ತರು. ಶುಕ್ರವಾರ ಮುಂಜಾನೆ ಆರೋಪಿಗಳನ್ನು ಅತ್ಯಾಚಾರ, ಕೊಲೆ ನಡೆದ ಸ್ಥಳದ ಪರಿಶೀಲನೆಗೆ ಕರೆದುಕೊಂಡು ಹೋಗಲಾಗಿತ್ತು. ಆಗ ಆರೋಪಿಗಳು ಪರಾರಿಯಾಗಲು ಪ್ರಯತ್ನ ನಡೆಸಿದ್ದು, ಪೊಲೀಸರು ಗುಂಡು ಹಾರಿಸಿದ್ದಾರೆ.

ಪಶುವೈದ್ಯೆ ಅತ್ಯಾಚಾರ, ಕೊಲೆ; ಆರೋಪಿಗಳು ಪೊಲೀಸ್ ಕಸ್ಟಡಿಗೆಪಶುವೈದ್ಯೆ ಅತ್ಯಾಚಾರ, ಕೊಲೆ; ಆರೋಪಿಗಳು ಪೊಲೀಸ್ ಕಸ್ಟಡಿಗೆ

ಎನ್ ಕೌಂಟರ್ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ. ನೂರಾರು ಜನರು ಆ ಪ್ರದೇಶದಲ್ಲಿ ಸೇರಿದ್ದು, ಪೊಲೀಸರು ಅವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಎನ್ ಕೌಂಟರ್‌ ಬಗ್ಗೆ ದೇಶಾದ್ಯಂತ ಚರ್ಚೆಗಳು ಆರಂಭವಾಗಿವೆ.

ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎನ್ ಕೌಂಟರ್ ನಡೆದಿದ್ದು ಹೇಗೆ? ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎನ್ ಕೌಂಟರ್ ನಡೆದಿದ್ದು ಹೇಗೆ?

ವಿಶ್ವನಾಥ್ ಸಜ್ಜನರ್

ವಿಶ್ವನಾಥ್ ಸಜ್ಜನರ್

ಪಶು ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿಗಳು ಎನ್ ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ. ಈ ಕಾರ್ಯಾಚರಣೆ ನಡೆಸಿರುವುದು ವಿಶ್ವನಾಥ್ ಸಜ್ಜನರ್. ಕರ್ನಾಟಕದ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸೈಬರಾಬಾದ್‌ನ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡುತ್ತಿದ್ದಾರೆ. ಆರೋಪಿಗಳನ್ನು ಸ್ಥಳ ಪರಿಶೀಲನೆಗಾಗಿ ಶುಕ್ರವಾರ ಮುಂಜಾನೆ ಕರೆದುಕೊಂಡು ಹೋಗಲಾಗಿತ್ತು.

ಹಿಂದೆಯೂ ಎನ್ ಕೌಂಟರ್ ಮಾಡಿದ್ದರು

ಹಿಂದೆಯೂ ಎನ್ ಕೌಂಟರ್ ಮಾಡಿದ್ದರು

ವಿಶ್ವನಾಥ್ ಸಜ್ಜನರ್ ಹಿಂದೆಯೂ ಆಸಿಡ್ ದಾಳಿ ನಡೆಸಿದ ಆರೋಪಿಗಳ ಮೇಲೆ ಎನ್ ಕೌಂಟರ್ ನಡೆಸಿದ್ದರು. ಈಗ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗುವ ಪ್ರಯತ್ನ ನಡೆಸಿದಾಗ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಎಲ್ಲಾ ಆರೋಪಿಗಳು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು

ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು

27 ವರ್ಷದ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿಗಳು ಶುಕ್ರವಾರ ಮುಂಜಾನೆ ಚಟಾನ್ ಪಲ್ಲಿ ಬ್ರಿಡ್ಜ್‌ ಬಳಿ ಎನ್ ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಗುರುವಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು ಸ್ಥಳದಲ್ಲಿ ಮಹಜರು ಮಾಡಲು ಅವರನ್ನು ಕರೆದುಕೊಂಡು ಹೋಗಿದ್ದರು. ಆಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಎಲ್ಲರೂ ಪರಾರಿಯಾಗಲು ಪ್ರಯತ್ನ ನಡೆಸಿದ್ದು, ಆಗ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

ನವೆಂಬರ್ 27 ರಿಂದ ಡಿಸೆಂಬರ್ 6

ನವೆಂಬರ್ 27 ರಿಂದ ಡಿಸೆಂಬರ್ 6

ನವೆಂಬರ್ 27ರಂದು ರಾತ್ರಿ 9.15ರ ಸುಮಾರಿಗೆ ಪಶುವೈದ್ಯೆಯನ್ನು ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಅಪಹರಣ ಮಾಡಿದ್ದರು. ಡಿಸೆಂಬರ್ 6ರ ಮುಂಜಾನೆ ಎಲ್ಲಾ ಆರೋಪಿಗಳು ಎನ್ ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ.

English summary
Hyderabad Veterinary doctor rape case all four accused have been killed in an encounter with the police. Karnataka Hubballi base Vishwanth Sajjanar behind the encounter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X