• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಿಎಚ್‌ಎಂಸಿ ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲಿ ಏಕೆ?

|

ಹೈದರಾಬಾದ್, ಡಿಸೆಂಬರ್ 04 : ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆಯಲ್ಲಿ ಇವಿಎಂಗಳ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗಿದೆ. 150 ವಾರ್ಡ್‌ಗಳಿಗೆ ನೆಡೆದ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಸಂಜೆಯ ವೇಳೆಗೆ ಫಲಿತಾಂಶ ಸಿಗುವ ನಿರೀಕ್ಷೆ ಇದೆ.

ಈಗ ಎಲ್ಲಾ ಚುನಾವಣೆಗೆ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಆದರೆ, ಹೈದರಾಬಾದ್‌ನಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗಿದೆ. ಆದ್ದರಿಂದ ಮತ ಎಣಿಕೆ ಪ್ರಕ್ರಿಯೆಯೂ ಸಹ ವಿಳಂಬವಾಗಲಿದೆ.

ಜಿಎಚ್‌ಎಂಸಿ ಚುನಾವಣೆಯಲ್ಲಿ 100 ಸ್ಥಾನದಲ್ಲಿ ಗೆಲುವು; ಕೆ. ಕವಿತಾ

ತೆಲಂಗಾಣ ರಾಜ್ಯದ ಚುನಾವಣಾ ಆಯೋಗ ಚುನಾವಣೆ ಘೋಷಣೆಯಾದ ಬಳಿಕ ಪ್ರಮುಖ ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಿತು. ಸಭೆಯಲ್ಲಿ ರಾಜಕೀಯ ಪಕ್ಷಗಳು ಸಹ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಒಪ್ಪಿಗೆ ನೀಡಿದವು.

ಜಿಎಚ್‌ಎಂಸಿ ಚುನಾವಣೆ; ಹೈದರಾಬಾದ್‌ನಲ್ಲಿ ಸಂಭ್ರಮಾಚರಣೆ ಇಲ್ಲ!

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚುನಾವಣಾ ಆಯೋಗ ಸಭೆಯನ್ನು ನಡೆಸಿತ್ತು. ಮತದಾನದ ಸಂದರ್ಭದಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಬಗ್ಗೆ ಅಧಿಕಾರಿಗಳ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗಿತ್ತು.

GHMC Polls: ಹೈದರಾಬಾದ್ ಚುನಾವಣೆಗೆ ಯಾಕಿಷ್ಟು ಮಹತ್ವ?

ಜಿಎಚ್‌ಎಂಸಿಯ 150 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ಎಣಿಕೆ ಮಾಡಬೇಕಾದ ಕಾರಣ ಚುನಾವಣಾ ಫಲಿತಾಂಶ ಪ್ರಕಟವಾಗುವುದು ಸಂಜೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟು 30 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. 8,152 ಸಿಬ್ಬಂದಿಗಳು ಮತ ಎಣಿಕೆಯಲ್ಲಿ ತೊಡಗಿದ್ದಾರೆ. 1,122 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಬಿಜೆಪಿ 149, ಕಾಂಗ್ರೆಸ್ 146, ಟಿಆರ್‌ಎಸ್ ಪಕ್ಷ 150 ವಾರ್ಡ್‌ಗಳಲ್ಲಿಯೂ ಕಣದಲ್ಲಿದೆ. ಎಐಎಂಐಎಂ 51 ವಾರ್ಡ್‌ಗಳಲ್ಲಿ ಮಾತ್ರ ಕಣಕ್ಕಿಳಿದಿದೆ.

ತೆಲಂಗಾಣ ರಾಜ್ಯದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 2,71,492. ಸಕ್ರಿಯ ಪ್ರಕರಣಗಳ ಸಂಖ್ಯೆ 8,999. ಇದುವರೆಗೂ ರಾಜ್ಯದಲ್ಲಿ 1465 ಜನರು ಮೃತಪಟ್ಟಿದ್ದಾರೆ.

English summary
Due to COVID pandemic ballot paper used for Greater Hyderabad Municipal Corporation (GHMC) election. Major political parties approved for use of ballot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X