ಹೈದರಾಬಾದ್ ಆಸ್ಪತ್ರೆಯಲ್ಲಿ ಯುವತಿ ಆತ್ಮಹತ್ಯೆ: ಕಾರಣ ನಿಗೂಢ
ಹೈದರಾಬಾದ್, ಅಕ್ಟೋಬರ್ 06: ಹೈದರಾಬಾದಿನ ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಆಸ್ಪತ್ರೆಯಲ್ಲಿ ಆತಂಕ ಸೃಷ್ಟಿಯಾಗಿದೆ.
28 ವರ್ಷದ ಯುವತಿಯೊಬ್ಬರು ನಿನ್ನೆ(ಅ.06) ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆಯ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಆಸ್ಪತ್ರೆಯಲ್ಲಿ ಸಿಬ್ಬಂದಿಗಳಲ್ಲ ಇದ್ದಾಗಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಎಂಬ ಬಗ್ಗೆಯ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸಿಆರ್ ಪಿ(ಅಪರಾಧ ಸಂಹಿತೆ) ಸೆಕ್ಷನ್ 174 ರನ್ವಯ ದೂರು ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications