ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈದರಾಬಾದ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ

|
Google Oneindia Kannada News

ಹೈದರಾಬಾದ್, ಡಿಸೆಂಬರ್ 12: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಏಳೆಂಟು ಮಂದಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನ ಹೊರವಲಯದಲ್ಲಿ ನಡೆದಿದೆ.

ಮಹಾರಾಷ್ಟ್ರದ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಸಾವು, ಮಂದಿಗೆ ಗಾಯಮಹಾರಾಷ್ಟ್ರದ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಸಾವು, ಮಂದಿಗೆ ಗಾಯ

ಹೈದರಾಬಾದ್ ನಗರದ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ವಿಂದ್ಯಾ ಆರ್ಗಾನಿಕ್ ಪ್ರೈವೇಟ್ ಲಿಮಿಟೆಡ್ ರಾಸಾಯನಿಕ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ದ್ರಾವಕವೊಂದನ್ನು ಕಾರ್ಖಾನೆಯಲ್ಲಿ ಇಟ್ಟಿದ್ದು, ಅದಕ್ಕೆ ಬೆಂಕಿ ತಗುಲಿ ಸ್ಫೋಟಗೊಂಡು ಇಡೀ ಕಾರ್ಖಾನೆಗೆ ಹತ್ತಿಕೊಂಡಿರಬಹುದೆಂದು ಅಂದಾಜಿಸಲಾಗಿದೆ. ಕಾರ್ಖಾನೆಯಿಂದ ಹೆಚ್ಚಿನ ಮಟ್ಟದಲ್ಲಿ ಹೊಗೆಯಾಡುತ್ತಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಕುಕಟ್ಪಲ್ಲಿ, ಪತಂಚೆರು, ಮಿಯಾಪುರ್ ನಿಂದ ಮೂರು ಅಗ್ನಿಶಾಮಕ ವಾಹನಗಳು ಬಂದಿವೆ. ಮಧ್ಯಾಹ್ನ 1.30ರ ಸಮಯದಲ್ಲಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ತಿಳಿದುಬಂದಿದೆ.

Workers Injured After Huge Fire Broke Out At Drug Factory In Hyderabad

ಸ್ಫೋಟದಲ್ಲಿ ಏಳೆಂಟು ಉದ್ಯೋಗಿಗಳಿಗೆ ಗಾಯವಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಷ್ಟು ಉದ್ಯೋಗಿಗಳು ಒಳಗೆ ಸಿಲುಕಿರುವ ಶಂಕೆ ವ್ಯಕ್ತಗೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಈವರೆಗೆ ಯಾವುದೇ ಸಾವು ಸಂಭವಿಸಿದ ವರದಿಯಾಗಿಲ್ಲ.

English summary
Around seven to eight people were injured after an explosion at a drug manufacturing factory at Hyderabad,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X