ಜಗನ್ ನಿರಶನಕ್ಕೆ ಪೊಲೀಸರ ಬ್ರೇಕ್

ಹೈದರಾಬಾದ್, ಅ.10 : ಅಖಂಡ ಆಂಧ್ರಪ್ರದೇಶಕ್ಕಾಗಿ ಆಗ್ರಹಿಸಿ ವೈಎಸ್ಆರ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ನಡೆಸುತ್ತಿದ್ದ ಉಪವಾಸಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರತ್ಯೇಕ ರಾಜ್ಯ ರಚನೆ ವಿರೋಧಿಸಿ ಐದು ದಿನಗಳಿಂದ ವೈಎಸ್ಸಾರ್ ಕಾಂಗ್ರೆಸ್ ಸಂಸದ ಜಗನ್ ಮೋಹನ್ ರೆಡ್ಡಿ ಜ್ಯುಬಿಲಿ ಹಿಲ್ಸ್‌ನಲ್ಲಿ ಉಪವಾಸ ಕುಳಿತಿದ್ದರು. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಉಪವಾಸ ಸ್ಥಳಕ್ಕೆ ಪೊಲೀಸರು ಆಗಮಿಸಿದರು.

Jaganmohan Reddy

ಸ್ಥಳದಲ್ಲಿ ಜಗನ್ ಬೆಂಬಲಿಗರು ನಿರ್ಮಿಸಿದ್ದ ಬ್ಯಾರಿಕೇಡ್‌ಗಳನ್ನು ಧ್ವಂಸಗೊಳಿಸಿ ವೈಎಸ್ಸಾರ್ ಕಾಂಗ್ರೆಸ್ ಮುಖಂಡನನ್ನು ವಶಕ್ಕೆ ತೆಗೆದುಕೊಂಡರು. ನಂತರ ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಿಸಲಾಯಿತು.

ನಾಯ್ಡು ನಿರಾಳ : ನವದೆಹಲಿಯ ಆಂಧ್ರಭವನದಲ್ಲಿ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರು ಅನುಮತಿಯಿಲ್ಲದೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ನಿರಶನದ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಗೃಹ ಸಚಿವ ಶಿಂದೆ ಹೇಳಿದ್ದಾರೆ. ಇದರಿಂದ ಅವರು ಉಪವಾಸ ಮುಂದುವರೆಸಬಹುದಾಗಿದೆ.

ಅನುಮತಿಯಿಲ್ಲದೆ ನಿರಶನ ನಡೆಸುತ್ತಿರುವ ಚಂದ್ರಬಾಬು ಅವರನ್ನು ಸ್ಥಳಾಂತರಿಸಲು ಕೇಂದ್ರ ಗೃಹ ಸಚಿವಾಲಯದ ನೆರವು ಕೋರಿ ಆಂಧ್ರ ಸರ್ಕಾರ ಪತ್ರಬರೆದಿತ್ತು. ಆದರೆ, ಈ ವಿಚಾರದಲ್ಲಿ ತಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

6 ಸಾವಿರ ಕೋಟಿ ನಷ್ಟ : ವಿದ್ಯುತ್ ವಿತರಣೆ ಹಾಗೂ ನಿರ್ಮಾಣ ಕಂಪನಿಗಳ ನೌಕರರ ಮುಷ್ಕರದಿಂದಾಗಿ ಆಂಧ್ರಪ್ರದೇಶ ರಾಜ್ಯದ ಬಹುತೇಕ ಕೈಗಾರಿಕೆಗಳು ಮತ್ತು ಐಟಿ ಉದ್ಯಮಗಳು ನಷ್ಟ ಅನುಭವಿಸುತ್ತಿವೆ. ತಜ್ಞರ ಪ್ರಕಾರ, ಕಳೆದ 3 ದಿನಗಳಲ್ಲಿ ಒಟ್ಟು 6 ಸಾವಿರ ಕೋಟಿ ನಷ್ಟ ಸಂಭವಿಸಿದೆ.

ಶುಕ್ರವಾರ ಸಭೆ : ಆಂಧ್ರವಿಭಜನೆಗೆ ಸಂಬಂಧಿಸಿ ಚರ್ಚೆ ನಡೆಸಲು ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ನೇತೃತ್ವದ ಕೇಂದ್ರ ಸಚಿವರ ಸಮಿತಿ ಶುಕ್ರವಾರ ದೆಹಲಿಯಲ್ಲಿ ಸಭೆ ಸೇರಲಿದೆ. ಸಭೆಯಲ್ಲಿ ಹೊಸ ರಾಜ್ಯದ ಗಡಿ ಹಾಗೂ ಸ್ವರೂಪದ ಕುರಿತು ಚರ್ಚೆ ನಡೆಯಲಿದೆ.

ಮರುಪರಿಶೀಲನೆ ಇಲ್ಲ : ತೆಲಂಗಾಣ ರಚನೆಯನ್ನು ಮರುಪರಿಶೀಲಿಸುವ ಪ್ರಶ್ನೆಯೇ ಇಲ್ಲ. ಸರ್ಕಾರ ಈಗ ಏನು ನಿರ್ಧಾರ ತೆಗೆದುಕೊಂಡಿದೆ ಅದೇ ಅಂತಿಮ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳ ಜತೆಗೆ ವಿಸ್ತೃತ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೂ ಮೊದಲು ಪ್ರತ್ಯೇಕ ರಾಜ್ಯ ರಚನೆ ಮಾಡಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+