ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 1 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಸಪ್ಟೆಂಬರ್ 1: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿಹೆಚ್ಚು ಮಂದಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 228ನೇ ದಿನ ಹೊಸ ದಾಖಲೆಯಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 1,04,42,184 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ.

ಕೊರೊನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ದಾಖಲೆ ಬರೆದ ಭಾರತಕೊರೊನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ದಾಖಲೆ ಬರೆದ ಭಾರತ

ದೇಶದಲ್ಲಿ ಈವರೆಗೂ 65,12,14,767 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೆ 64,36,13,160 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

1.04 Crore Dose Vaccination in single Day; India achieved highest ever Covid-19 vaccination

ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,58,383 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 83,89,866 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,23,410 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,32,25,370 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 50,09,03,929 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 15,03,10,838 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾವೈರಸ್ ಸೋಂಕಿತರಿಗೆ ನಾಲ್ಕು ಹಂತದಲ್ಲಿ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಸಪ್ಟೆಂಬರ್ 1ರ ಅಂಕಿ-ಅಂಶಗಳ ಪ್ರಕಾರ, 64,36,13,160 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 64,36,13,160

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 14,94,040

* ಕೊವಿಡ್-19 ಲಸಿಕೆಯ ಲಭ್ಯತೆ - 5,42,30,546

English summary
1.04 Crore Dose Vaccination in single Day; India achieved highest ever Covid-19 vaccination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X