• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ 1.11 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ

|

ನವದೆಹಲಿ, ಫೆಬ್ರವರಿ.22: ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಣೆ ವೇಗ ಹೆಚ್ಚಾಗಿದೆ. ಕಳೆದ 37 ದಿನಗಳಲ್ಲಿ 1,11,16,854 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೂ 1,01,49,002 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 9,67,852 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಕಡ್ಡಾಯ

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ 7 ರಾಜ್ಯಗಳಲ್ಲಿ ಒಟ್ಟು ಕೊವಿಡ್-19 ಲಸಿಕೆಯ ಶೇ.71ರಷ್ಟು ಲಸಿಕೆಯನ್ನು ವಿತರಿಸಲಾಗಿದೆ. ಕರ್ನಾಟಕ, ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿಹೆಚ್ಚು ಒಟ್ಟು ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿ ಯಾವ ರಾಜ್ಯದಲ್ಲಿ ಎಷ್ಟು ಡೋಸ್ ಲಸಿಕೆ ವಿತರಿಸಲಾಗಿದೆ ಎನ್ನುವುದರ ಪಟ್ಟಿ ಇಲ್ಲಿದೆ ನೋಡಿ.

ಭಾರತದಲ್ಲೇ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ನೀಡಿದ 7 ರಾಜ್ಯಗಳು:

ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು

ಕರ್ನಾಟಕ - 1,14,043

ಒಡಿಶಾ - 94,966

ಆಂಧ್ರ ಪ್ರದೇಶ - 89,645

ತೆಲಂಗಾಣ - 87,159

ಉತ್ತರ ಪ್ರದೇಶ - 85,752

ಗುಜರಾತ್ - 60925

ಪಶ್ಚಿಮ ಬಂಗಾಳ - 49912

English summary
1.11 Crore Indians Got Coronavirus Vaccination: Top 7 States In India In Vaccination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X