Get Updates
Get notified of breaking news, exclusive insights, and must-see stories!

ಭಾರತ; 24 ಗಂಟೆಯಲ್ಲಿ 1,52,879 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಏಪ್ರಿಲ್ 11; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1, 52,879 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಆರೋಗ್ಯ ಸಚಿವಾಲಯದ ಬುಲೆಟಿನ್ ಪ್ರಕಾಶ 24 ಗಂಟೆಯಲ್ಲಿ 90,584 ಜನರು ಡಿಸ್ಚಾರ್ಜ್ ಆಗಿದ್ದಾರೆ. 839 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,33,58,805ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು ಗುಣಮುಖಗೊಂಡವರ ಸಂಖ್ಯೆ 1,20,81,443. ಸಕ್ರಿಯ ಪ್ರಕರಣಗಳ ಸಂಖ್ಯೆ 11,08,087 ಮತ್ತು ಒಟ್ಟು ಮೃತಪಟ್ಟವರ ಸಂಖ್ಯೆ 1,69,275ಕ್ಕೆ ಏರಿದೆ.

 1,52,879 New COVID 19 Cases In Last 24 Hours In India

ಏಪ್ರಿಲ್ 10ರ ತನಕ ದೇಶದಲ್ಲಿ 25,66,26,850 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಶನಿವಾರ ದೇಶದಲ್ಲಿ 14,12,047 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಯಾವ ರಾಜ್ಯದಲ್ಲಿ ಎಷ್ಟು?; ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿ ಸೋಂಕನ್ನು ನಿಯಂತ್ರಿಸಲು ವಾರಾಂತ್ಯದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಶನಿವಾರ ರಾಜ್ಯದಲ್ಲಿ 55,411 ಹೊಸ ಪ್ರಕರಣಗಳು ದಾಖಲಾಗಿವೆ.

ಕೇರಳ ರಾಜ್ಯದಲ್ಲಿ ಶನಿವಾರ 6,194 ಹೊಸ ಪ್ರಕರಣ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 39,774ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಶನಿವಾರ 6,955 ಹೊಸ ಪ್ರಕರಣ ದಾಖಲಾಗಿದೆ. ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಶನಿವಾರದಿಂದ ರಾತ್ರಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 61,653.

ತಮಿಳುನಾಡು ರಾಜ್ಯದಲ್ಲಿ 5,989 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 9,26,816ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 37,673.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+